HomeLatest Newsಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ನಾಲ್ವರು ಸಜೀವದಹನ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ನಾಲ್ವರು ಸಜೀವದಹನ

ಗುವಾಹಟಿ: ಗ್ಯಾಸ್ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವದಹನವಾಗಿರುವ ಘಟನೆ ಅಸ್ಸಾಂನ ಜಲುಕ್ಬರಿಯ ಜೋಯ್ಮೊತಿ ಪ್ರದೇಶದಲ್ಲಿ ನಡೆದಿದೆ.

ಸ್ಫೋಟದ ಶಬ್ಧಕೇಳಿ ಅಕ್ಕಪಕ್ಕದ ನಿವಾಸಿಗಳು ಬಂದು ನೋಡುವಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ನಾಲ್ವರು ಮೃತಪಟ್ಟಿದ್ದರು.

ಸದ್ಯ ಬೆಂಕಿ ನಂದಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಗುವಾಹಟಿಯ ಮತ್ತೊಂದು ಪ್ರದೇಶದಲ್ಲಿಯೂ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುವಾಹಟಿಯ ಕಹಿಲಿಪಾರ ಪ್ರದೇಶದ ವಾಣಿಜ್ಯ ಸಂಕೀರ್ಣದಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾನೆ. ಬಾರ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕರ ಮಾಹಿತಿ ಆಧರಿಸಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಬಾರ್‌ನ ಸ್ನಾನಗೃಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular