HomeKarnatakaವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಜಿಲ್ಲೆಯ ವಿವಿಧ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 11 ಅರ್ಜಿ ಸಲ್ಲಿಸಲು ಕೊನೆಯ ದಿನ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಗೆ ಒಳಪಡುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ/ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗಾಗಿ ಈ ತಾತ್ಕಾಲಿಕ ನೇಮಕಾತಿ ನಡೆಯಲಿದೆ. ಜಿಲ್ಲೆಯ ವಸತಿ ಶಾಲೆಗಳಲ್ಲಿ ಇಂಗ್ಲಿಷ್-2, ಹಿಂದಿ-2, ಗಣಿತ-3, ವಿಜ್ಞಾನ-2, ಸಮಾಜ ವಿಜ್ಞಾನ-1, ಕಂಪ್ಯೂಟರ್-1, ದೈಹಿಕ ಶಿಕ್ಷಣ-4 ಹುದ್ದೆಗಳು ಸೇರಿ ಒಟ್ಟು 15 ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಪದವಿ ಹಾಗೂ ಬಿ.ಇಡಿ ಪದವಿ ಪಡೆದಿರಬೇಕು. ಇದರೊಂದಿಗೆ ಟಿ.ಇ.ಟಿ ಉತ್ತೀರ್ಣರಾಗಿರುವುದು ಕಡ್ಡಾಯ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಮಾಸಿಕ ಗೌರವಧನ ನೀಡಲಾಗುವುದು. ಈ ನೇಮಕಾತಿಯು ಸಂಪೂರ್ಣ ತಾತ್ಕಾಲಿಕವಾಗಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅಥವಾ ಖಾಯಂ ಶಿಕ್ಷಕರು ನೇಮಕಗೊಳ್ಳುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಇದೇ ಜೂನ್ 11ರ ಒಳಗಾಗಿ  ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗ, ಬಿ.ಡಿ. ರಸ್ತೆ, ಚಿತ್ರದುರ್ಗ ಇಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-222937 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular