ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಾಗಿ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಬಿ.ಎಸ್. ಕಾಂತರಾಜು ಅವರನ್ನು ನೇಮಕ ಮಾಡಲಾಗಿದೆ.
BWSSB ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಪಿಟಿಸಿಎಲ್ ಎಂಡಿ ಆಗಿ ಡಾ. ರಾಮಪ್ರಸಾತ್ ಮನೋಹರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, BWSSB ಅಧ್ಯಕ್ಷರಾಗಿ ಡಾ. ಮಂಜುಳಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

