HomeKarnatakaಜಾನುವಾರು ಮೇಯಿಸಲು ಹೋಗಿದ್ದ ವೇಳೆ ಸಿಡಿಲು ಬಡಿದು ಯುವಕ ಸಾವು, ಸಮೀಪದಲ್ಲೇ ಇದ್ದ ಸೋದರ ಪಾರು

ಜಾನುವಾರು ಮೇಯಿಸಲು ಹೋಗಿದ್ದ ವೇಳೆ ಸಿಡಿಲು ಬಡಿದು ಯುವಕ ಸಾವು, ಸಮೀಪದಲ್ಲೇ ಇದ್ದ ಸೋದರ ಪಾರು

ಗದಗ: ಗದಗ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಯುವಕ ಮೃತಪಟ್ಟಿದ್ದು, ಸಮೀಪದಲ್ಲೇ ಇದ್ದ ಸೋದರ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಪ್ರಶಾಂತ್ ಹುಡೇದ(19) ಮೃತಪಟ್ಟವರು ಎಂದು ಹೇಳಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಜಾನುವಾರು ಮೇಯಿಸಲು ಸಹೋದರರು ಹೋಗಿದ್ದ ವೇಳೆ ಸಿಡಿಲು ಬಡಿದಿದೆ.

ತಮ್ಮ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮ್ಮನಿಂದ 60 ಮೀಟರ್ ದೂರದಲ್ಲಿದ್ದ ಅಣ್ಣ ಅಪಾಯದಿಂದ ಪಾರಾಗಿದ್ದಾರೆ. ತಮ್ಮ ಪ್ರಶಾಂತ್ ಶವವನ್ನು ಹೊತ್ತುಕೊಂಡು ಅಣ್ಣ ಊರಿಗೆ ಬಂದಿದ್ದಾನೆ. ಪ್ರಶಾಂತ್ ಮೃತದೇಹ ಕಂಡು ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular