HomeKarnatakaಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: ಸಹಾಯಧನಕ್ಕೆ ಅರ್ಜಿ

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: ಸಹಾಯಧನಕ್ಕೆ ಅರ್ಜಿ

ಕೊಪ್ಪಳ: ಕುಷ್ಟಗಿ ಪುರಸಭೆ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 (ನಗರ) ಅಡಿ ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.

ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆ ಅಡಿಯಲ್ಲಿ 4 ಯೋಜನೆಯನ್ನು ಜಾರಿಗೊಳಿಸಿದ್ದು, ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿರುವ ಅರ್ಹ ಹಾಗೂ ಆಸಕ್ತಿ ಇರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಸೇವಾ ಕೇಂದ್ರದಲ್ಲಿ ಅಥವಾ ತಾವೇ ಖುದ್ದಾಗಿ ವೆಬ್‌ಸೈಟ್ URL://pmayyrban.gov.in ನಲ್ಲಿ ಜೂನ್ 30ರ ವರೆಗೆ ಅರ್ಜಿ ಹಾಗೂ ದಾಖಲೆ ಸಲ್ಲಿಸಬಹುದಾಗಿದೆ. ಇದುವರೆಗೆ ಅರ್ಜಿ ಸಲ್ಲಿಸದೇ ಇರುವ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.

 ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯದ ಆಶ್ರಯ ವಿಭಾಗದಿಂದ ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಮತ್ತು ಕುಷ್ಟಗಿ ಪುರಸಭೆಯ ಆಡಳಿತಾಧಿಕಾರಿಗಳು ಆಗಿರುವ ಕೊಪ್ಪಳ ಸಹಾಯಕ ಆಯುಕ್ತರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular