ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಪೊಲೀಸರು ಕಾರ್ಯಾಚರಣೆ ನಡೆಸಿ 7.64 ರೂ. ಮೌಲ್ಯದ ಎಂಡಿಎಂಎ ಜಪ್ತಿ ಮಾಡಿದ್ದಾರೆ.
ಮೊಹಮ್ಮದ್ ಸವಾದ್, ಜುಬೇರ್ ಮತ್ತು ರಶೀದ್ ಎಂಬುವರನ್ನು ಬಂಧಿಸಲಾಗಿದೆ. ಬಂಟ್ವಾಳ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೆಲ್ಕಾರ್ ಫ್ಲೈ ಓವರ್ ಬಳಿ ಕಾರ್ ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಕಾರ್, ಮೂರು ಮೊಬೈಲ್ ಮತ್ತು ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

