HomeKarnatakaBIG NEWS: ಕಗ್ಗಂಟಾಗಿಯೇ ಉಳಿದ ರಾಜೀನಾಮೆ ಪ್ರಹಸನ: ಏನು ನಿರ್ಧಾರ ಮಾಡ್ತಾರೆ ಕಾದುನೋಡೋಣ ಎಂದ ರಾಮಲಿಂಗಾರೆಡ್ಡಿ

BIG NEWS: ಕಗ್ಗಂಟಾಗಿಯೇ ಉಳಿದ ರಾಜೀನಾಮೆ ಪ್ರಹಸನ: ಏನು ನಿರ್ಧಾರ ಮಾಡ್ತಾರೆ ಕಾದುನೋಡೋಣ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರು: ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಧ್ಯರಾತ್ರಿವರೆಗೆ ಸಂಧಾನ ಸಭೆ ನಡೆಸಿ ಮನವೊಲಿಕೆ ಮಾಡಿದ್ದಾರೆ. ಕೂತು ಮಾತನಾಡಿ ಎಲ್ಲವನ್ನೂ ಬಗೆಹರಿಸಿಕೊಂಡಿದ್ದೇವೆ ಎಂದು ಸಭೆ ಬಳಿಕ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಎಲಾ ಗೊಂದಲಗಳು ನಿವಾರಣೆಯಾಗಿವೆ. ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದನ್ನೇ ನಾನೂ ಹೇಳುತ್ತೇನೆ ಎಂದು ರಾಮಲಿಂಗಾರೆಡ್ಡ್ ಕೂಡ ಹೇಳಿದ್ದರು. ಆದರೆ ರಾಜೀನಾಮೆಯನ್ನು ಹಿಂಪಡೆಯುತ್ತಾರಾ? ಎಂಬ ಪ್ರಶ್ನೆಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಮಾತುಕತೆ ಬಳಿಕವೂ ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ ಇನ್ನೂ ಗುಟ್ಟಾಗಿಯೇ ಉಳಿದಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ನಾನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ನಿನ್ನೆ ರಾತ್ರಿ ಏನೂ ಚರ್ಚೆ ಮಾಡಿಲ್ಲ, ಊಟ ಮಾಡಿದೆವು ಅಷ್ಟೇ ಎಂದಿದ್ದಾರೆ.

ಏನು ನಿರ್ಧಾರ ಮಾಡ್ತಾರೆ ಎಂಬುದನ್ನು ಕಾದುನೋಡೋಣ. ನಾನು ಹೆಚ್ಚಿಗೆ ಏನೂ ಹೇಳುವುದಿಲ್ಲ. ಖಾತೆ ಬದಲಾವಣೆ ಬೇರೆ ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನೋಡೋಣ ಎಂದಷ್ಟೇ ಹೇಳಿದ್ದಾರೆ. ಈ ಮುಲಕ ರಾಅಜೀನಾಮೆ ವಾಪಸ್ ಪಡೆಯುವ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಹಾಗಾಗಿ ರಾಮಲಿಂಗಾರೆಡ್ಡಿ ರಾಜೀನಾಮೆ ರಹಸ್ಯ ಇನ್ನೂ ನಿಗೂಢವಾಗಿಯೇ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರಾಭಿವೃದ್ಧಿ ಖಾತೆಗಾಗಿ ಪಟ್ಟು ಹಿಡಿದ್ದ ರಾಮಲಿಂಗಾರೆಡ್ಡಿ, ‘ಕೊಟ್ಟರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ, ಇಲ್ಲದಿದ್ದರೆ ಸಚಿವ ಸ್ಥಾನವೇ ಬೇಡ’ ಎಂದು ಹೇಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. 2023ರಲ್ಲೇ ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಮನೆಗೆ ಬಂದು ಬೆಂಗಳೂರು ಅಭಿವೃದ್ಧಿ ಖಾತೆಯ ಭರವಸೆ ನೀಡಿದ್ದರು ಎಂದು ರಾಮಲಿಂಗಾ ರೆಡ್ಡಿ ಬಹಿರಂಗಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್, ‘ಮಾತು ಕೊಟ್ಟಿದ್ದು ನಿಜ, ಆದರೆ ಖಾತೆ ಬದಲಾವಣೆ ವಿಚಾರವನ್ನು ಹೈಕಮಾಂಡ್ ನಿರ್ಧರಿಸಬೇಕು’ ಎನ್ನುತ್ತಲೇ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವುದಾಗಿ ಹೇಳಿದ್ದರು.

ನಿನ್ನೆ ತಡರಾತ್ರಿ ಬೆಂಗಳುರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಮಲಿಂಗಾರೆಡ್ಡಿ ಚರ್ಚೆ ನಡೆಸಿದ್ದಾರೆ. ಸುದೀರ್ಘ ಚರ್ಚೆ ಬಳಿಕ ಮಧ್ಯರಾತ್ರಿ 1:30ರ ಸುಮಾರಿಗೆ ಮಾತುಕತೆ ಮುಗಿಸಿ ಹೊರಬಂದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಯಾವುದೇ ಆತಂಕ ಬೇಡ, ನಾವೆಲ್ಲಾ ಹಳೆಯ ಸ್ನೇಹಿತರು. ಕೂತು ಮಾತನಾಡಿ ಎಲ್ಲವನ್ನೂ ಬಗೆಹರಿಸಿಕೊಂಡಿದ್ದೇವೆ ಎಂದರು. ರಾಜೀನಾಮೆ ವಾಪಸ್ ಪಡೆದಿದ್ದಾರೆಯೇ ಎಂಬ ಪ್ರಶ್ನೆಗೆ, ನಿಮಗೆ ಎಲ್ಲವನ್ನೂ ಹೇಳಬೇಕಾಗಿಲ್ಲ ಎಂದರು. ಇತ್ತ ಸಚಿವ ರಾಮಲಿಂಗಾ ರೆಡ್ಡಿ ಕೂಡ ಸಿಎಂ ಧಾಟಿಯಲ್ಲೇ ಉತ್ತರಿಸಿ, ಮುಖ್ಯಮಂತ್ರಿಗಳು ಏನು ಹೇಳಿದ್ದಾರೋ ಅದನ್ನೇ ನಾನು ಹೇಳುವುದು. ಎಲ್ಲ ಗೊಂದಲಗಳು ನಿವಾರಣೆಯಾಗಿವೆ ಎಂದು ಹೇಳಿ ಹೊರಟಿದ್ದರು. ಈಗ ರಾಜೀನಾಮೆ ವಾಪಸ್ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ರಾಮಲಿಂಗಾರೆಡ್ಡಿ ನೀಡುತ್ತಿಲ್ಲ. ಹಾಗಾಗಿ ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ ಕಗ್ಗಂಟಾಗಿಯೇ ಉಳಿದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular