HomeKarnataka150ರೂ ಬದಲಾಗಿ ತಪ್ಪಾಗಿ 15,682ರೂ. ಪಾವತಿಸಿದ ಪ್ರಯಾಣಿಕ: ಹಣ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಆಟೋ...

150ರೂ ಬದಲಾಗಿ ತಪ್ಪಾಗಿ 15,682ರೂ. ಪಾವತಿಸಿದ ಪ್ರಯಾಣಿಕ: ಹಣ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಪ್ರಯಾಣಿಕರೊಬ್ಬರು ಆಟೋ ಚಾಲಕರೊಬ್ಬರಿಗೆ 150ರೂ. ಡಿಜಿಟಲ್ ಪಾವತಿ ಬದಲಿಗೆ ತಪ್ಪಾಗಿ 15,682ರೂ. ಹಣವನ್ನು ಪಾವತಿಸಿದ್ದು, ತಪ್ಪಾಗಿ ಹಣ ಹಾಕಿದ್ದನ್ನು ಅರಿತ ಆಟೋ ಚಾಲಕ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಅಪ್ಪಟ ಪ್ರಾಮಾಣಿಕತೆಯಿಂದ ಇಡೀ ಇಂಟರ್ನೆಟ್ ಜಗತ್ತಿನ ಮನ ಗೆದ್ದಿದ್ದಾನೆ. ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ ಮಾಡಬೇಕಿದ್ದ ಪ್ರಯಾಣಿಕನೊಬ್ಬ, ಆಕಸ್ಮಿಕವಾಗಿ ಬರೋಬ್ಬರಿ 15,682 ರೂಪಾಯಿಗಳನ್ನು ಚಾಲಕನ ಖಾತೆಗೆ ವರ್ಗಾಯಿಸಿ ಆತಂಕಕ್ಕೊಳಗಾಗಿದ್ದರು. ಆದರೆ, ಪ್ರಯಾಣಿಕನ ತಪ್ಪು ಅರಿವಾದ ತಕ್ಷಣವೇ ಯಾವುದೇ ಹಿಂಜರಿಕೆಯಿಲ್ಲದೆ ಇಡೀ ಮೊತ್ತವನ್ನು ಪ್ರಾಮಾಣಿಕವಾಗಿ ಮರಳಿ ನೀಡುವ ಮೂಲಕ ಆಟೋ ಚಾಲಕ ಮಾನವೀಯತೆ ಮೆರೆದಿದ್ದಾನೆ.

ಆಟೋ ಚಾಲಕನ ಅಪ್ಪಟ ಪ್ರಾಮಾಣಿಕತೆಗೆ ನೆಟ್ಟಿಗರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತನ್ನದಲ್ಲದ ಹಣ ತನಗೆ ಬೇಡ ಎಂಬ ಚಾಲಕನ ಈ ನಿರ್ಧಾರ ಸಾಕಷ್ಟು ಜನರಿಗೆ ಮಾದರಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಯಾಣಿಕನೊಬ್ಬ ಆಟೋದಲ್ಲಿ ಪ್ರಯಾಣಿಸಿದ್ದರು. ಪ್ರಯಾಣ ಮುಗಿದ ಬಳಿಕ ಆಟೋ ಬಾಡಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸುವಾಗ, ಎಡವಟ್ಟಾಗಿ 156ರೂ. ಬದಲಿಗೆ, ಆಕಸ್ಮಿಕವಾಗಿ ಬರೋಬ್ಬರಿ 15,682ರೂ. ಹಣವನ್ನು ಚಾಲಕನ ಖಾತೆಗೆ ವರ್ಗಾಯಿಸಿದ್ದಾರೆ.

ಟ್ರಾನ್ಸಾಕ್ಷನ್ ಪೂರ್ಣಗೊಂಡ ಮೇಲೆಯೇ ಪ್ರಯಾಣಿಕನಿಗೆ ತಾನು ಮಾಡಿದ ತಪ್ಪು ಅರಿವಿಗೆ ಬಂದಿದೆ. ಅಪರಿಚಿತ ಆಟೋ ಚಾಲಕನಿಂದ ಇಷ್ಟು ದೊಡ್ಡ ಮೊತ್ತದ ಹಣ ಮರಳಿ ಸಿಗುತ್ತದೋ ಇಲ್ಲವೋ ಎಂಬ ಆತಂಕದಲ್ಲೇ ಆತ ಚಾಲಕನನ್ನು ಸಂಪರ್ಕಿಸಲು ಯತ್ನಿಸಿದ್ದಾರೆ. ಪ್ರಯಾಣಿಕನ ತಪ್ಪು ಪಾವತಿ ಅರಿತ ಆಟೋ ಚಾಲಕ, ತನ್ನ ಖಾತೆಗೆ ಹೆಚ್ಚುವರಿ ಹಣ ಬಂದಿರುವುದನ್ನು ಒಪ್ಪಿಕೊಂಡಿದ್ದಾರೆ ಅಲ್ಲದೇ ಸಂಪೂರ್ಣ ಮೊತ್ತವನ್ನು ತಕ್ಷಣವೇ ಪ್ರಯಾಣಿಕನಿಗೆ ಮರಳಿ ವರ್ಗಾಯಿಸಿದ್ದಾರೆ.

ತಮಗಾದ ಈ ಅಪರೂಪದ ಅನುಭವವನ್ನು ಪ್ರಯಾಣಿಕ ಲಿಂಕ್ಡ್‌ಇನ್‌ನಲ್ಲಿ ಹಂಚಿಕೊಂಡಿದ್ದಾರೆ. ಆಟೋ ಚಾಲಕನ ಪ್ರಾಮಾಣಿಕತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. “ಇಂತಹ ಘಟನೆಗಳು ಮನುಷ್ಯತ್ವದ ಮೇಲಿನ ನಂಬಿಕೆಯನ್ನು ಮತ್ತೆ ಚಿಗುರಿಸುತ್ತವೆ” ಎಂದು ಸಾವಿರಾರು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular