HomeKarnatakaBIG NEWS: ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

BIG NEWS: ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದೇನೆ. ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ ಎಂದು ತಿಳಿಸಿದರು.

ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯ ಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಪವನ್ ಖೇರಾ ಅವರನ್ನು ನಮ್ಮ ರಾಜ್ಯದಿಂದ ಕಣಕ್ಕೆ ಇಳಿಸಲಾಗಿದೆ. ಜೊತೆಗೆ ಎಐಸಿಸಿ ಕಾರ್ಯದರ್ಶಿ, ಯುವ ಮುಖಂಡ ಮನ್ಸೂರ್ ಅಲಿ ಖಾನ್ ಅವರಿಗೂ ಅವಕಾಶ ನೀಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ವಿಧಾನ ಪರಿಷತ್ ಚುನಾವಣೆಯ ಎಲ್ಲ ಐದು ಸ್ಥಾನಗಳಿಗೂ ಕಾಂಗ್ರೆಸ್ ಕಾರ್ಯಕರ್ತರಿಗೇ ಅವಕಾಶ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರ ಸರಕಾರದ ವಿರುದ್ಧ ಜನರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ.ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಶುಭ ಕೋರಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಾನು ಗೌರವಯುತವಾಗಿ ಹೋಗಿ ಅವರನ್ನು ಭೇಟಿ ಮಾಡುವೆ. ಅವರು ರಾಜಕಾರಣ ಮಾಡುವುದು ಬೇಡ, ನಾವು ರಾಜಕಾರಣ ಮಾಡುವುದು ಬೇಡ. ರಾಜ್ಯದ ಜನತೆಯ ಹಿತಕ್ಕಾಗಿ ನಾವು ಎಲ್ಲರೂ ಸೇರಿ ಏನು ಕೆಲಸ ಮಾಡಬೇಕೋ ಅದನ್ನು ಮಾಡೋಣ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular