HomeKarnatakaಇನ್ನು ನಕಲಿ ದೇಶಪ್ರೇಮಿಗಳ ಆಟ ರಾಜ್ಯದಲ್ಲಿ ನಡೆಯಲ್ಲ: ಹರಿಪ್ರಸಾದ್

ಇನ್ನು ನಕಲಿ ದೇಶಪ್ರೇಮಿಗಳ ಆಟ ರಾಜ್ಯದಲ್ಲಿ ನಡೆಯಲ್ಲ: ಹರಿಪ್ರಸಾದ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಪೇಮೆಂಟ್ ಕೊಟ್ಟು ಅಧ್ಯಕ್ಷರಾಗುವುದು ರೂಢಿಯೂ ಇಲ್ಲ, ಕೊಲೆ ಕೇಸಿನಲ್ಲಿ ಗಡಿಪಾರಾದವರು, ಪೋಕ್ಸೋ ಆರೋಪಿಗಳು, ಕ್ರಿಮಿನಲ್ಸ್ ಹಾಗೂ ಜೈಲುವಾಸಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕೆಟ್ಟ ಪರಂಪರೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಸದೇ ಇದ್ದ ನರೇಂದ್ರ ಮೋದಿಯನ್ನು ಗುಜರಾತಿನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು? ಯಾವ ಜನರಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದರು ಎನ್ನುವ ಇತಿಹಾಸವಾದರೂ ಬಿಜೆಪಿಗೆ ನೆನಪಿದೆಯೇ ಎಂದು ಪ್ರಶ್ನಿಸಿದ್ದಾರೆ.

ಯಾವ ಚುನಾವಣೆಯನ್ನೂ ನಡೆಸದೇ, ಕನಿಷ್ಟಪಕ್ಷ RSS ಸಂಘಪರಿವಾರದಲ್ಲೇ ಚುನಾವಣೆ ಎದುರಿಸದ ಮೋಹನ್ ಭಾಗವತ್ ಗೆ ಯಾವ ಜನರು ಆಯ್ಕೆ ಮಾಡಿದ್ದಾರೆ?”ಜೀ” ಗಳನ್ನು ಚುನಾವಣಾ ಚಾಣಕ್ಯ ಎಂದು “ಹುಜೂರು” ಎನ್ನುವ ರಾಜ್ಯ ಬಿಜೆಪಿ ಕರ್ನಾಟಕದಲ್ಲಿ ಎಂದೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಬರುವುದೂ ಇಲ್ಲ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯ ಪಾಕಿಸ್ತಾನದ ಮೇಲಿನ ಪ್ರೀತಿಯಂತೂ ನಿನ್ನೆ ಮೊನ್ನೆಯದಲ್ಲ. ಅದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ದ್ವಿ ರಾಷ್ಟ್ರ ಸಿದ್ದಾಂತದ ಪ್ರತಿಪಾದಿಸಿದ ಸಾವರ್ಕರ್ ಇಂದ ಹಿಡಿದು ಇಂದಿನ ರಸಬಾಳೆ, ಹೊಸಬಾಳೆಯ “ಪಾಕಿಸ್ತಾನದೊಂದಿಗೆ ಮಾತುಕತೆಯ ಬಾಗಿಲು ಮುಚ್ಚಬಾರದು” ಎನ್ನುವವರೆಗೂ ಮುಂದುವರೆಯುತ್ತಲೇ ಇದೆ.

ಹೌದು ಆರ್.ಎಸ್.ಎಸ್. ಮತ್ತು ಬಿಜೆಪಿ ಪ್ರತಿಪಾದಿಸುವ ನಕಲಿ ಹಿಂದೂತ್ವವನ್ನು ವಿರೋಧಿಸುತ್ತಲೇ ಇದ್ದೇನೆ, ವಿರೋಧಿಸುತ್ತಲೇ ಇರುತ್ತೇನೆ. ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular