HomeLatest NewsGOOD NEWS: 2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ...

GOOD NEWS: 2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ವ್ಯಾಪ್ತಿಯಲ್ಲಿ 2,400 ಚದರಡಿಯವರೆಗಿನ ಶೇಕಡ 20ರಷ್ಟು ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಒಂದು ಬಾರಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ(OC) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

2400 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ನೆಲಮಹಡಿ ಮತ್ತು ಮೂರು ಅಂತಸ್ತಿನ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ ಹಾಗೂ ನಾಲ್ಕು ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳ ಮಾಲೀಕರು ವಿದ್ಯುತ್ ಸಂಪರ್ಕಕ್ಕಾಗಿ 2026ರ ಮೇ 31ರೊಳಗೆ ಅರ್ಜಿ ಸಲ್ಲಿಸಿದ್ದರೆ ಮಾತ್ರ ಒಸಿ ಪಡೆಯುವುದರಿಂದ ವಿನಾಯಿತಿ ಪಡೆಯಬಹುದಾಗಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಕಟ್ಟಡ ಪೂರ್ಣಗೊಂಡಿರುವ ಮತ್ತು ವಿದ್ಯುತ್ ಸಂಪರ್ಕಕ್ಕೆ ಅರ್ಹವಾದ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಕಟ್ಟಡದ ಫೋಟೋ ತೆಗೆದು ದಾಖಲು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಎನ್.ಕೆ. ಲಕ್ಷ್ಮಿಸಾಗರ್ ಅವರು ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular