ಕೊಪ್ಪಳ: ಗಂಗಾವತಿ ತಾಲೂಕಿನ ಹೊಸ ಅಯೋಧ್ಯ ಗ್ರಾಮದಲ್ಲಿ ತಡರಾತ್ರಿ ತಂದೆ ಹಾಗೂ ಅಕ್ಕನನ್ನು ಚಾಕುವಿನಿಂದ ಇರಿದು ಯುವಕ ಕೊಲೆ ಮಾಡಿದ್ದಾನೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ತಂದೆ, ತಾಯಿ ಹಾಗೂ ಅಕ್ಕನ ಮೇಲೆ ಸಾಯಿಮಣಿ ದಾಳಿ ನಡೆಸಿದ್ದಾನೆ. ತಂದೆ ವೆಂಕಟ ನಾಯ್ಡು(45), ಅಕ್ಕ ಪ್ರಗತಿ(19) ಅವರನ್ನು ಸಾಯಿಮಣಿ ಕೊಲೆ ಮಾಡಿದ್ದಾನೆ.
ಗಂಭೀರವಾಗಿ ಗಾಯಗೊಂಡಿರುವ ತಾಯಿ ಸೌಜನ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸಾಯಿಮಣಿ ತಾನು ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ. ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾಯಿಮಣಿಗೆ ಚಿಕಿತ್ಸೆ ನೀಡಲಾಗಿದೆ. ಆರೋಪಿ ಸಾಯಿಮಣಿ ಆನ್ಲೈನ್ ಗೇಮ್ ಗೆ ದಾಸನಾಗಿರುವ ಶಂಕೆ ವ್ಯಕ್ತವಾಗಿದೆ. ಹಣ ಕಳೆದುಕೊಂಡು ಕುಟುಂಬದವರ ಮೇಲೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

