HomeLatest Newsಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೇನಾಧಿಕಾರಿ ದುರ್ಮರಣ

ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೇನಾಧಿಕಾರಿ ದುರ್ಮರಣ

ಶ್ರೀನಗರ: ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ವೇಳೆ ಯೋಧರೊಬ್ಬರು ಕಂದಕಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿದೆ.

ರಾಜೌರಿ ಜಿಲ್ಲೆಯ ಕಠಿಣ ಪರ್ವತ ಪ್ರದೇಶಗಳಲ್ಲಿ ದೇಶದ ಭದ್ರತೆಗಾಗಿ ಹಾಗೂ ಗಡಿಗಳನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಹೋರಾಡುತ್ತಿದ್ದ ಭಾರತೀಯ ಸೇನೆಯ ವೀರ ಅಧಿಕಾರಿ, ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಕಂದಕಕ್ಕೆ ಬಿದ್ದು ಕರ್ತವ್ಯದ ಅವಧಿಯಲ್ಲಿಯೇ ಹುತಾತ್ಮರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೌರಿಯ ದುರ್ಗಮ ಕಾಡುಗಳಲ್ಲಿ ಅಡಗಿರುವ ಪಾಕಿಸ್ತಾನಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಕಳೆದ 15 ದಿನಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಜಂಟಿ ಕಾರ್ಯಾಚರಣೆಯಾದ ‘ಆಪರೇಷನ್ ಶೇರುವಾಲಿ’ ನೇತೃತ್ವವನ್ನು ಇವರು ವಹಿಸಿದ್ದರು.

ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿಯ ಮೇರೆಗೆ ಸೇನೆ, ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಅರೆಸೈನಿಕ ಪಡೆಗಳು ಜಂಟಿಯಾಗಿ ನಡೆಸುತ್ತಿದ್ದ ಈ ಮಹತ್ವದ ಶೋಧ ಕಾರ್ಯಾಚರಣೆಯು ಯಶಸ್ಸಿನ ಹಂತ ತಲುಪಿತ್ತು. ಶನಿವಾರ ಸಂಜೆ ಡೋರಿಮಲ್ ಪ್ರದೇಶದ ಕಡಿದಾದ ಬಂಡೆಗಳು ಹಾಗೂ ದುರ್ಗಮ ಪರ್ವತಗಳ ನಡುವೆ ಕಾರ್ಯಾಚರಣೆಯಲ್ಲಿದ್ದಾಗ, ಹವಾಮಾನ ವೈಪರೀತ್ಯ ಹಾಗೂ ಅಪಾಯಕಾರಿ ಭೌಗೋಳಿಕ ಪರಿಸ್ಥಿತಿಯಿಂದಾಗಿ ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಆಕಸ್ಮಿಕವಾಗಿ 30 ಮೀಟರ್ ಆಳದ ಕಂದಕಕ್ಕೆ ಜಾರಿ ಬಿದ್ದಿದ್ದಾರೆ.

ತಕ್ಷಣವೇ ಸಹ ಸೈನಿಕರು ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಹೊರತೆಗೆದರಾದರೂ, ಗಂಭೀರ ಗಾಯಗಳಾಗಿದ್ದರಿಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರ ಅಧಿಕಾರಿಯ ಈ ಅತ್ಯುನ್ನತ ದೇಶಭಕ್ತಿಯನ್ನು ಶ್ಲಾಘಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಹಂಚಿಕೊಂಡಿರುವ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತೀವ್ರ ಸಂತಾಪ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular