HomeKarnatakaಬಹುಕೋಟಿ ವಂಚನೆ ಪ್ರಕರಣ: ಅಧಿಕಾರಿಗಳ ದಾಳಿ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಆದಿತ್ಯರಾಜ್ ಕ್ಯಾಪಿಟಲ್...

ಬಹುಕೋಟಿ ವಂಚನೆ ಪ್ರಕರಣ: ಅಧಿಕಾರಿಗಳ ದಾಳಿ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಆದಿತ್ಯರಾಜ್ ಕ್ಯಾಪಿಟಲ್ ಸಂಸ್ಥೆಯ ಮಾಲೀಕ ಬಲರಾಮ್ ಮಾನೆ

ಬೆಳಗಾವಿ: ಬೆಳಗಾವಿಯಲ್ಲಿ ಶಿವಾನಂದ್ ನೀಲಣ್ಣವರ್ ನ ಶಿವಂ ಕಂಪನಿಯಿಂದ 4500 ಕೋಟಿ ವಂಚನೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕಂಪನಿಯ ಬಹುಕೋಟಿ ಹಗರಣ ಬೆಳಕಿಗೆ ಬಂದಿದೆ. ಆದಿತ್ಯರಾಜ್ ಕ್ಯಾಪಿಟಲ್ ಕಂಪನಿಯು ಸಾವಿರಾರಾರು ಕೋಟಿ ರೂಪಾಯಿಗಳನ್ನು ಜನರಿಗೆ ವಂಚಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕಂಪನಿ ಕಚೇರಿ, ಮಾಲೀಕ ಬಲರಾಮ್ ಮಾನೆ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಬಲರಾಮ್ ಮಾನೆ ಇದೀಗ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿರುವ ಬಲರಾಮ್ ಮಾನೆ, ನಮ್ಮ ಸಂಸ್ಥೆ ಕಾನೂನು ಬದ್ಧವಾಗಿ ನಡೆಯುತ್ತಿರುವ ಸಂಸ್ಥೆಯಾಗಿದೆ. ನಾವು ಯಾವುದೇ ನಿಯಮಗಳನ್ನು ಗಾಳಿಗೆ ತೂರಿ ಸಂಸ್ಥೆ ನಡೆಸುತ್ತಿಲ್ಲ, ಎಲ್ಲವೂ ಕಾನೂನು ಪ್ರಕಾರವೇ ನಡೆಯುತ್ತಿದೆ. ಠೇವಣಿದಾರರು ಯಾರೂ ಧೈರ್ಯ ಕಳೆದುಕೊಳ್ಳಬಾರದು. ನಿಮ್ಮ ಬೆವರಿನ ಹಣ ನಮ್ಮ ಬಳಿ ಸುರಕ್ಷಿತವಾಗಿದೆ. ನಾವು ಪ್ರತಿಯೊಬ್ಬರಿಗೂ ಟಿಡಿಎಸ್ (TDS) ಕಡಿತಗೊಳಿಸಿದ ನಂತರವೇ ಶೇರಿಂಗ್ ಅಮೌಂಟ್ ನೀಡಿದ್ದೇವೆ ಎಂದು ಹೂಡಿಕೆದಾರರಿಗೆ ಭರವಸೆ ನೀಡಿದ್ದಾರೆ.

ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದಾಗ ನಾವು ಖಂಡಿತವಾಗಿ ವಿಜಯ ಸಾಧಿಸುತ್ತೇವೆ. ನಾನು ನಿಮಗಾಗಿಯೇ ಹೋರಾಡುತ್ತಿದ್ದೇನೆ. ಈ ಕಾನೂನು ಸಂಘರ್ಷದಲ್ಲಿ ಗೆದ್ದು ಆದಿತ್ಯರಾಜ್ ಕಂಪನಿ ಮತ್ತೆ ಪುಟಿದೇಳಲಿದೆ. ನಾನು ಶೀಘ್ರದಲ್ಲೇ ಹಿಂತಿರುಗಿ ಬರುತ್ತೇನೆ, ನಾವೆಲ್ಲರೂ ಮತ್ತೆ ಸಿಗೋಣ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ತಲೆಮರೆಸಿಕೊಂಡಿರುವ ಆರೋಪಿ ಬಲರಾಮ್ ಮಾನೆ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಜಿ. ಬೊರಸೆ ಅವರು, “ಆರೋಪಿಯ ಬಂಧನಕ್ಕಾಗಿ ಈಗಾಗಲೇ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲಿಯೇ ಬಲರಾಮ್ ಮಾನೆಯನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ. ಈ ನಡುವೆ ಬಲರಾಮ್ ಮಾನೆ ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular