ಕಲಬುರಗಿ: ಪೋಕ್ಸೋ ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ಮಹಿಳಾ ಕಾನ್ಸ್ಟೇಬಲ್ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ರೈಟರ್ ಜ್ಯೋತಿ ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಸ್ಟೇಷನ್ ರೈಟರ್ ಜ್ಯೋತಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ದಾಳಿಯ ವೇಳೆ ಪರಾರಿಯಾಗಿದ್ದ ಎಎಸ್ಐ ಶಿವಶರಣಪ್ಪನನ್ನು ಬೆನ್ನತ್ತಿ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ ಎನ್ನಲಾಗಿದೆ.
10 ಸಾವಿರ ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ರೈಟರ್ ಜ್ಯೋತಿ ವಶಕ್ಕೆ ಪಡೆಯಲಾಗಿದೆ. ಚಿಂದಿ ಆಯುವ ಮಹಿಳೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಲೈಂಗಿಕ ದೌರ್ಜನ್ಯ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಹಾಕಲಾಗುತ್ತಿದೆ. ಕೇಸ್ ನಿಮ್ಮ ಪರವಾಗಿ ಆಗುವಂತೆ ನೋಡಿಕೊಳ್ಳುತ್ತೇವೆ ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

