HomeKarnatakaಮಾವು ಮೇಳಕ್ಕೆ ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದ ಮಾಜಿ ಪ್ರಧಾನಿ ದೇವೇಗೌಡರು

ಮಾವು ಮೇಳಕ್ಕೆ ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಲಾಲ್ ಬಾಗ್‌ನ ಮಾವು ಮೇಳಕ್ಕೆ ಭೇಟಿ ನೀಡಿ, ಮಾವು ಬೆಳೆಗಾರರೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ರೈತರು ಮಾವು ಮತ್ತು ಹಲಸು ಬೆಲೆ ಕುಸಿತದಿಂದ ಆಗಿರುವ ಅಪಾರ ನಷ್ಟ ಮತ್ತು ಸಂಕಷ್ಟಗಳನ್ನು ಹಿರಿಯರಾದ ದೇವೇಗೌಡರಲ್ಲಿ ತೋಡಿಕೊಂಡರು. ರೈತರ ಸಮಸ್ಯೆಗಳನ್ನು ಆಲಿಸಿ, ಮಾವು, ಹಲಸು ಹಣ್ಣುಗಳಿಗೆ ಸೂಕ್ತ ಬೆಲೆ ಸೇರಿದಂತೆ, ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಅನ್ನದಾತರ ಈ ಕಣ್ಣೀರು ರಾಜ್ಯ ಕಾಣುತ್ತಿಲ್ಲವೇ? ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಂಕಷ್ಟದಲ್ಲಿರುವ ಮಾವು ಮತ್ತು ಹಲಸು ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular