HomeKarnatakaರಾಜ್ಯಸಭೆ, ಎಂಎಲ್ಸಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಸುಮಲತಾ, ದೇವೇಗೌಡರಿಗೆ ತಪ್ಪಿದ ಅವಕಾಶ

ರಾಜ್ಯಸಭೆ, ಎಂಎಲ್ಸಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಸುಮಲತಾ, ದೇವೇಗೌಡರಿಗೆ ತಪ್ಪಿದ ಅವಕಾಶ

ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೊನೆಯ ಗಳಿಗೆಯಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆ ಸದಸ್ಯರನ್ನಾಗಿ ಮುಂದುವರಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಅವಕಾಶ ತಪ್ಪಿದೆ.

ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ಪ್ರೊ.ಎಂ. ನಾಗರಾಜ್ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಪಕ್ಷದ ಶಿಸ್ತು ಸಮಿತಿಯ ಮಾಜಿ ಉಪಾಧ್ಯಕ್ಷ ಲಿಂಗರಾಜ್ ಪಾಟೀಲ್, ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಭಾನುವಾರ ತಡರಾತ್ರಿ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದ ರಾಜ್ಯ ಘಟಕದಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಾಜಿ ಉಪಾಧ್ಯಕ್ಷ ನಿರ್ಮಲ್ ಕುಮಾರ್, ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದ್ದು, ವಿಧಾನ ಪರಿಷತ್ ಚುನಾವಣೆಗೆ ರಘು ಕೌಟಿಲ್ಯ, ಪ್ರಮೋದ್ ಮಧ್ವರಾಜ್, ನಳಿನ್ ಕುಮಾರ್ ಕಟೀಲು, ಲಿಂಗರಾಜ ಪಾಟೀಲ್, ಮಂಜುಳಾ, ಶರಣು ತಳ್ಳಿಕೇರಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು.

ರಾಜ್ಯಸಭೆಗೆ ಎಂ. ನಾಗರಾಜ್, ವಿಧಾನ ಪರಿಷತ್ ಗೆ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular