HomeLatest News4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಪಶ್ಚಿಮ ಬಂಗಾಳ ಸಿಎಂ ಸುವೆಂದು ಅಧಿಕಾರಿ ಆದೇಶ

4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಪಶ್ಚಿಮ ಬಂಗಾಳ ಸಿಎಂ ಸುವೆಂದು ಅಧಿಕಾರಿ ಆದೇಶ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ 4,800 ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಗಡಿ ಭದ್ರತೆ ನಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸುವೆಂದು ಅಧಿಕಾರಿ, ಭಾರತ-ಬಾಂಗ್ಲಾದೇಶದ ಗಡಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಹೇಳಿದ್ದಾರೆ. ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಯಶಸ್ವಿಯಾಗಿ ಗಡೀಪಾರು ಮಾಡಲಾಗಿದ್ದು, ಇನ್ನುಳಿದ 836 ಜನರ ಸ್ವದೇಶಿ ವಾಪಸಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಗಡಿ ಭದ್ರತೆ ಮತ್ತು ಜನಗಣತಿ ಯೋಜನೆಗಳು ಗಡಿ ರಕ್ಷಣೆಯನ್ನು ಬಲಪಡಿಸುವುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರವು ಇನ್ನೂ ತಡೆಗೋಡೆ ನಿರ್ಮಾಣ ಬಾಕಿ ಇರುವ 556 ಕಿ.ಮೀ ವ್ಯಾಪ್ತಿಯ ಪೈಕಿ 100 ಕಿ.ಮೀ ಭೂಮಿಯನ್ನು ಈಗಾಗಲೇ ಭದ್ರತಾ ಪಡೆಗೆ ಹಸ್ತಾಂತರಿಸಿದೆ. ಈ ಪೈಕಿ ಉತ್ತರ ಬಂಗಾಳದ ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಚಿಕನ್ಸ್​ ನೆಕ್ ವಲಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಪಾರದರ್ಶಕ ಆಡಳಿತವನ್ನು ತರಲು ಜನಗಣತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ ಮನೆ-ಮನೆ ಸಮೀಕ್ಷೆ ನಡೆಯಲಿದೆ. ಮುಂದಿನ ವರ್ಷದ ಫೆಬ್ರವರಿ ಅಂತ್ಯದ ವೇಳೆಗೆ ಈ ಪ್ರಕ್ರಿಯೆ ಪೂರ್ಣಗೊಂಡು, ಗಡಿ ವಿಂಗಡಣೆ ಕಾರ್ಯಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಅನ್ನಪೂರ್ಣ ಯೋಜನೆ ಮತ್ತು ಫಲಾನುಭವಿಗಳ ಪರಿಶೀಲನೆ ಹಿಂದಿನ ಸರ್ಕಾರದ ‘ಲಕ್ಷ್ಮಿರ್ ಭಂಡಾರ್’ ಯೋಜನೆಯಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಅರ್ಹ ಮಹಿಳೆಯರ ಸಬಲೀಕರಣಕ್ಕಾಗಿ ತರಲಾದ ‘ಅನ್ನಪೂರ್ಣ ಯೋಜನೆ’ಯಡಿಯಲ್ಲಿ ಪ್ರಸ್ತುತ 50 ಲಕ್ಷ ಮಹಿಳೆಯರು ತಲಾ 3,000 ರೂ.ಗಳ ಆರ್ಥಿಕ ನೆರವನ್ನು ಪಡೆದಿದ್ದಾರೆ. ಯೋಜನೆ ಜಾರಿಯಾದ ಮೊದಲ ದಿನವೇ 28 ಲಕ್ಷಕ್ಕೂ ಹೆಚ್ಚು ಮಹಿಳೆಯರ ಖಾತೆಗೆ ಹಣ ತಲುಪಿದೆ.

ಇನ್ನು ಫಲಾನುಭವಿಗಳ ಪಟ್ಟಿಯಲ್ಲಿದ್ದ ಸುಮಾರು 27 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲೇ ಇರಲಿಲ್ಲ ಮತ್ತು ಮಹಿಳೆಯರಿಗಾಗಿ ಮೀಸಲಾದ ಯೋಜನೆಯಲ್ಲಿ ಸುಮಾರು ಮೂರು ಲಕ್ಷ ಪುರುಷರು ಅಕ್ರಮವಾಗಿ ಸೌಲಭ್ಯ ಪಡೆದಿದ್ದರು ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಜಾರಿಗೆ ತರಲಾದ ಕಟ್ಟುನಿಟ್ಟಾದ ಪರಿಶೀಲನಾ ಪ್ರಕ್ರಿಯೆಯು ಕಲ್ಯಾಣ ವಿತರಣಾ ವ್ಯವಸ್ಥೆಯನ್ನು ದೀರ್ಘಾವಧಿಯಲ್ಲಿ ಬಲಪಡಿಸಲಿದೆ ಎಂದು ಹೇಳಿದ್ದಾರೆ.

ಹಿಂದಿನ ತೃಣಮೂಲ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿವಿಧ ವಲಯಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ತನಿಖೆಗಳ ಮೂಲಕ ಅಕ್ರಮಗಳು ಬಯಲಾಗುತ್ತಿವೆ. ಸರ್ಕಾರ ಬದಲಾವಣೆಯಾದ ನಂತರ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಭ್ರಷ್ಟಾಚಾರದಲ್ಲಿ ಭಾಗಿಯಾದ ಹಲವು ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳನ್ನು ಬಂಧಿಸಲಾಗಿದೆ ಎಂದುತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular