HomeKarnatakaBIG NEWS: ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಕಸರತ್ತು: 20 ಸಚಿವ ಸ್ಥಾನಗಳಿಗೆ...

BIG NEWS: ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಕಸರತ್ತು: 20 ಸಚಿವ ಸ್ಥಾನಗಳಿಗೆ 60ಕ್ಕೂ ಹೆಚ್ಚು ಶಾಸಕರ ಪೈಪೋಟಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲಿ ಈಗಗಾಲೇ ಮೊದಲ ಹಂತದಲ್ಲಿ 13 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಎರಡನೇ ಸುತ್ತಿನ ಸಂಪುಟ ರಚನೆ ಕಸರತ್ತು ಆರಂಭವಾಗಿದೆ.

ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ದಂಡಯಾತ್ರೆ ಕೈಗೊಳ್ಳುವ ಮೂಲಕ ಹೈಕಮಾಂಡ್ ನಾಯಕರ ಬಳಿ ಭಾರಿ ಲಾಭಿ ಆರಂಭಿಸಿದ್ದಾರೆ. ಸಂಪುಟದಲ್ಲಿ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗಾಗಿ ಬರೋಬ್ಬರಿ 60ಕ್ಕೂ ಹೆಚ್ಚು ಶಾಸಕರು ಪೈಪೋಟಿ ನಡೆಸುತ್ತಿದ್ದು, ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಸ್ಥಾನ ವಂಚಿತರಾದ ಹಲವು ಹಿರಿಯ ಹಾಗೂ ಮಾಜಿ ಸಚಿವರು ಇದನ್ನು ತಮಗೆ ಆದ ಅಗೌರವ ಎಂದು ಭಾವಿಸಿ ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ, ಎರಡನೇ ಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಮಂತ್ರಿ ಸ್ಥಾನ ಕೈತಪ್ಪಬಾರದು ಎಂದು ದೆಹಲಿ ಮಟ್ಟದಲ್ಲಿ ಸರ್ಕಸ್ ಮಾಡುತ್ತಿದ್ದಾರೆ.

ಒಂದೊಂದು ಸಚಿವ ಸ್ಥಾನಕ್ಕೆ ಕನಿಷ್ಠ 3 ರಿಂದ 4 ಜನ ಶಾಸಕರು ರೇಸ್‌ನಲ್ಲಿದ್ದು, ಆಕಾಂಕ್ಷಿಗಳ ದೀರ್ಘ ಪಟ್ಟಿ ನೋಡಿ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವು ಶುರುವಾಗಿದೆ. ಹೀಗಾಗಿ ಜೂನ್ 18ರ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕವೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಬಾರಿ ಸಂಪುಟ ಸೇರಲು ಆಕಾಂಕ್ಷಿಗಳು ಜಾತಿವಾರು ಲೆಕ್ಕಾಚಾರ, ಜಿಲ್ಲಾವಾರು ಕೋಟಾ ಮತ್ತು ಸಮುದಾಯದ ಪ್ರಾಬಲ್ಯದ ಕಾರ್ಡ್ ಬಳಸುತ್ತಿದ್ದಾರೆ. ಆರೇಳು ಬಾರಿ ಗೆದ್ದಿದ್ದರೂ ಇದುವರೆಗೆ ಒಮ್ಮೆಯೂ ಸಚಿವರಾಗದ ಹಿರಿಯ ಶಾಸಕರು ತಮಗೆ ಮೊದಲ ಆದ್ಯತೆ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.

ಮತ್ತೊಂದೆಡೆ, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದರಿಂದ ಅವರ ಆಪ್ತ ವಲಯದ ಶಾಸಕರು ತಮಗೆ ಮಂತ್ರಿಗಿರಿ ಖಚಿತ ಎಂಬ ನಿರೀಕ್ಷೆಯಲ್ಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರಭಾವ ಹಾಗೂ ಬೆಂಬಲ ಬಳಸಿ ಸಂಪುಟ ಸೇರಲು ಇನ್ನಷ್ಟು ಶಾಸಕರು ಪ್ರಯತ್ನಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular