ದಾವಣಗೆರೆ : ದಾವಣಗೆರೆಯಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಡಿಯೋ ಮಾಡಿದವರನ್ನು ಹಾಗೂ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟವರನ್ನು ಬಂಧಿಸಲಾಗಿದೆ.ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಯುವಕರನ್ನು ಬಸವಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೂನ್ 3 ರಂದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕಿಡಿಗೇಡಿಗಳು ಈ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

