HomeKarnatakaBREAKING : ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ |Lokayukta...

BREAKING : ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಧಾರವಾಡ : ಜಿಲ್ಲೆಯ ಗರಗ, ತಡಕೋಡ, ಅಮ್ಮಿನಭಾವಿ ಸೇರಿದಂತೆ ವಿವಿಧ ಭಾಗಗಳ 24 ಗ್ರಾಮ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿದರು. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಯ್ಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಹಲವು ತಂಡಗಳು ಏಕಕಾಲದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದವು.

ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾಮಗಾರಿ ನಡೆಸದೇ ಬಿಲ್ ಪಡೆದಿರುವ ಆರೋಪ, ಕಳಪೆ ಕಾಮಗಾರಿ, ಹಾಗೂ ಸರ್ಕಾರಿ ಅನುದಾನದ ದುರ್ಬಳಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಾಳಿ ವೇಳೆ ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳ ದಾಖಲೆಗಳು, ಹಣಕಾಸು ವ್ಯವಹಾರಗಳು, ಟೆಂಡರ್ ಪ್ರಕ್ರಿಯೆಗಳು, ಕಾಮಗಾರಿ ಮಂಜೂರಾತಿ ಪತ್ರಗಳು ಹಾಗೂ ಬಿಲ್‌ಗಳ ಪರಿಶೀಲನೆ ನಡೆಸಿದರು. ಕೆಲವು ಗ್ರಾಮ ಪಂಚಾಯಿತಿ ಕಚೇರಿಗಳಿಂದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವ ಮಾಹಿತಿಯೂ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಾಯುಕ್ತರ ದಾಳಿಯಿಂದ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಅಧಿಕಾರಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತನಿಖೆ ಪೂರ್ಣಗೊಂಡ ನಂತರ ಇನ್ನಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. ಭ್ರಷ್ಟಾಚಾರ ಹಾಗೂ ಅಕ್ರಮಗಳಿಗೆ ಸಂಬಂಧಿಸಿದಂತೆ ಬಂದ ಸಾರ್ವಜನಿಕ ದೂರುಗಳ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದ್ದು, ದಾಖಲೆಗಳ ಪರಿಶೀಲನೆಯ ಬಳಿಕ ಅಕ್ರಮಗಳು ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular