HomeLatest News21 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಬಾಂಗ್ಲಾದೇಶ; ಒಟ್ಟು 23 ಪಂದ್ಯಗಳಲ್ಲಿ...

21 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಬಾಂಗ್ಲಾದೇಶ; ಒಟ್ಟು 23 ಪಂದ್ಯಗಳಲ್ಲಿ ಬಾಂಗ್ಲಾ ಗೆದ್ದಿರುವುದು ಕೇವಲ ಇಷ್ಟೇ ಬಾರಿ!

ಇತ್ತೀಚೆಗಷ್ಟೆ ಪಾಕಿಸ್ತಾನ ಪ್ರವಾಸ ಕೈಗೊಂಡು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಸೋತು ಹಿನ್ನಡೆ ಅನುಭವಸಿದ್ದ ಆಸ್ಟ್ರೇಲಿಯಾ ಸದ್ಯ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿದ್ದು, ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡುತ್ತಿದೆ.

ಮೊದಲಿಗೆ ಏಕದಿನ ಸರಣಿ ನಡೆಯುತ್ತಿದ್ದು, ನಿನ್ನೆ ( ಜೂನ್ 9 ) ಢಾಕಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ 86 ರನ್‌ಗಳ ಗೆಲುವನ್ನು ದಾಖಲಿಸಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಬಾಂಗ್ಲಾದೇಶ ಎರಡನೇ ಬಾರಿಗೆ ಏಕದಿನ ಪಂದ್ಯವನ್ನು ಗೆದ್ದಿದೆ.

ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಇಲ್ಲಿಯವರೆಗೂ ಉಭಯ ತಂಡಗಳು 23 ಏಕದಿನ ಪಂದ್ಯಗಳಲ್ಲಿ ಮುಖಮುಖಿಯಾಗಿದ್ದು, ಆಸ್ಟ್ರೇಲಿಯಾ 20 ಪಂದ್ಯಗಳಲ್ಲಿ ಗೆದ್ದಿದ್ದು, ಬಾಂಗ್ಲಾದೇಶ ಎರಡು ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಫಲಿತಾಂಶವಿಲ್ಲದೇ ಮುಗಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, 2005ರ ಜೂನ್ 18ರಂದು ಕಾರ್ಡಿಫ್ ಕ್ರೀಡಾಂಗಣದಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಅದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯವನ್ನು ಗೆದ್ದಿತ್ತು.

ಇನ್ನು ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್‌ಗಳಲ್ಲಿ ತನ್ಜಿದ್ ಹಸನ್ ತಮಿಮ್ 54, ನಜ್ಮುಲ್ ಹೊಸೈನ್ ಶಾಂಟೊ 67 ಹಾಗೂ ಮೊಸದ್ದೆಕ್ ಹೊಸೈನ್ ಅಜೇಯ 86 ರನ್‌ಗಳ ಆಟದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 284 ರನ್ ಕಲೆಹಾಕಿ ಆಸ್ಟ್ರೇಲಿಯಾಗೆ 285 ರನ್‌ಗಳ ಗುರಿಯನ್ನು ನೀಡಿತು.

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಆಸ್ಟ್ರೇಲಿಯಾ 42.2 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು. ಇಷ್ಟರಲ್ಲಿ ಮಳೆರಾಯನ ಆಗಮನವಾದ ಕಾರಣ ಪಂದ್ಯ ರದ್ದಾಗಿ ಬಾಂಗ್ಲಾದೇಶ ಡಕ್‌ವರ್ತ್ ಲೂಯಿಸ್ ನಿಯಮದ ಪ್ರಕಾರ 86 ರನ್‌ಗಳ ಗೆಲುವನ್ನು ಕಂಡಿತು.

ಆಸ್ಟ್ರೇಲಿಯಾ ಪರ ಕೂಪರ್ ಕೊನೊಲ್ಲಿ 35 ರನ್, ಅಲೆಕ್ಸ್ ಕ್ಯಾರಿ 47 ಹಾಗೂ ಕ್ಯಾಮೆರಾನ್ ಗ್ರೀನ್ ಅಜೇಯ 52 ರನ್ ಗಳಿಸಿದ್ದು ಬಿಟ್ಟರೆ ತಂಡದ ಇನ್ಯಾವ ಆಟಗಾರನೂ ಸಹ ಇಪ್ಪತ್ತು ರನ್‌ಗಳ ಗಡಿ ದಾಟಲಾಗಲಿಲ್ಲ. ಅಷ್ಟರ ಮಟ್ಟಿಗೆ ಬಾಂಗ್ಲಾದೇಶ ಬೌಲಿಂಗ್ ದಾಳಿಯನ್ನು ನಡೆಸಿತು.

ನಹಿದ್ ರಾಣಾ ನಾಲ್ಕು ವಿಕೆಟ್ ಪಡೆದು ಮಿಂಚಿದರೆ, ಮುಸ್ತಫಿಜರ್ ರಹ್ಮಾನ್ ಎರಡು ವಿಕೆಟ್, ಟಸ್ಕಿನ್ ಅಹ್ಮದ್ ಒಂದು ವಿಕೆಟ್ ಪಡೆದರು. ಬ್ಯಾಟಿಂಗ್‌ನಲ್ಲಿ ಉತ್ತಮ ಆಟವನ್ನಾಡಿದ್ದ ಮೊಸದೆಕ್ ಹೊಸೈನ್ ಎರಡು ವಿಕೆಟ್ ಪಡೆದು ತಮ್ಮ ಆಲ್‌ರೌಂಡರ್ ಆಟಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular