HomeKarnatakaSHOCKING : ರಾಜ್ಯದ 'BCM' ಹಾಸ್ಟೆಲ್'ನಲ್ಲಿ ವಿದ್ಯಾರ್ಥಿನಿಯರ ಭರ್ಜರಿ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್,...

SHOCKING : ರಾಜ್ಯದ ‘BCM’ ಹಾಸ್ಟೆಲ್’ನಲ್ಲಿ ವಿದ್ಯಾರ್ಥಿನಿಯರ ಭರ್ಜರಿ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್, ಪೋಷಕರ ಆಕ್ರೋಶ

ಕಲಬುರಗಿ : ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಬಿಸಿಎಂ (BCM) ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಮದ್ಯಪಾನ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಶಿಕ್ಷಣ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೆಲ ವಿದ್ಯಾರ್ಥಿನಿಯರು ಹಾಸ್ಟೆಲ್ ಕೊಠಡಿಯೊಳಗೆ ಕುಳಿತು ಮದ್ಯ  ಸೇವನೆ ಮಾಡುತ್ತಿರುವ ದೃಶ್ಯಗಳು ಕಂಡುಬರುತ್ತಿವೆ ಎನ್ನಲಾಗಿದೆ. ವಿದ್ಯಾರ್ಥಿನಿಯರೇ ವಿಡಿಯೋ ಚಿತ್ರೀಕರಿಸಿಕೊಂಡಿದ್ದು, ಬಳಿಕ ಅದು ಸಾಮಾಜಿಕ ಜಾಲತಾಣಗಳಿಗೆ ಸೋರಿಕೆಯಾಗಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಬೆಳವಣಿಗೆ ಹಾಸ್ಟೆಲ್ ಭದ್ರತೆ ಹಾಗೂ ಶಿಸ್ತು ವ್ಯವಸ್ಥೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಾರ್ಡನ್ ವಿರುದ್ಧ ಆರೋಪ

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಹಾಸ್ಟೆಲ್ ವಾರ್ಡನ್ ವಿರುದ್ಧವೂ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರಕರಣವನ್ನು ಮುಚ್ಚಿಹಾಕಲು ಹಣ ಪಡೆದಿದ್ದಾರೆ ಎಂಬ ಆರೋಪಗಳು ಕೂಡ ಕೇಳಿ ಬರುತ್ತಿದೆ.  ಈ ಕುರಿತು ಅಧಿಕೃತ ತನಿಖೆ ನಡೆಸುವಂತೆ ಆಗ್ರಹಗಳು ಕೇಳಿಬರುತ್ತಿವೆ. ಆದರೆ ಈ ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕೃತ ದೃಢೀಕರಣ ಇನ್ನೂ ಲಭ್ಯವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೋಷಕರ ಆತಂಕ

ರಾಜ್ಯದ ವಿವಿಧ ಭಾಗಗಳು ಹಾಗೂ ಹೊರರಾಜ್ಯಗಳಿಂದಲೂ ವಿದ್ಯಾರ್ಥಿನಿಯರು ಈ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಮನೆಮಾಡಿದೆ. ಹಾಸ್ಟೆಲ್‌ಗೆ ಮದ್ಯ ಹೇಗೆ ತಲುಪಿತು? ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗಿದೆಯೇ? ಎಂಬ ಪ್ರಶ್ನೆಗಳು ಉದ್ಭವಿಸಿದ್ದು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ವಿಡಿಯೋ ವೈರಲ್ ಆದ ಬಳಿಕ ವಿಶ್ವವಿದ್ಯಾಲಯ ಆಡಳಿತ ಎಚ್ಚೆತ್ತುಕೊಂಡಿದ್ದು, ಘಟನೆ ಕುರಿತು ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಲಿದ್ದು, ಅಧಿಕೃತ ವರದಿಗಾಗಿ ಕಾದು ನೋಡಬೇಕಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular