HomeKarnataka‘ಗ್ಯಾರಂಟಿ’ ದುರ್ಬಳಕೆ ಪರಿಶೀಲನೆಗೆ ವೇಗ: 1.2 ಲಕ್ಷ ಫಲಾನುಭವಿಗಳು ‘ಗೃಹಲಕ್ಷ್ಮಿ’ ಯೋಜನೆಯಿಂದ ಹೊರಕ್ಕೆ

‘ಗ್ಯಾರಂಟಿ’ ದುರ್ಬಳಕೆ ಪರಿಶೀಲನೆಗೆ ವೇಗ: 1.2 ಲಕ್ಷ ಫಲಾನುಭವಿಗಳು ‘ಗೃಹಲಕ್ಷ್ಮಿ’ ಯೋಜನೆಯಿಂದ ಹೊರಕ್ಕೆ

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮೃತರಾದರವರನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, 17 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇದುವರೆಗೆ ಸುಮಾರು 1,12,092 ಕ್ಕೂ ಹೆಚ್ಚು ಅನರ್ಹರನ್ನು ಪತ್ತೆ ಹಚ್ಚಿ ಪಟ್ಟಿಯಿಂದ ಕೈ ಬಿಡಲಾಗಿದೆ.

ಇವುಗಳಲ್ಲಿ 55,232 ಮೃತರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಜೊತೆಗೆ ಐಟಿ, ಜಿಎಸ್‌ಟಿ ಪಾವತಿಸುತ್ತಿರುವ 56,860 ಮಹಿಳೆಯರನ್ನು ಗೃಹಲಕ್ಷ್ಮಿ ಪಟ್ಟಿಯಿಂದ ಕೈ ಬಿಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಸಾವಿರ, ಉಡುಪಿ ಜಿಲ್ಲೆಯಲ್ಲಿ 2,800, ದಾವಣಗೆರೆಯಲ್ಲಿ 4000, ಮೈಸೂರು ಜಿಲ್ಲೆಯಲ್ಲಿ 18000, ಉತ್ತರ ಕನ್ನಡ ಜಿಲ್ಲೆಯಲ್ಲಿ 6380, ಹಾವೇರಿಯಲ್ಲಿ 6346, ಚಿತ್ರದುರ್ಗದಲ್ಲಿ 12,637, ಕೊಪ್ಪಳ ಜಿಲ್ಲೆಯಲ್ಲಿ 7,200 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 1,12,092 ಫಲಾನುಭವಿಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular