HomeLatest Newsಮಹಿಳೆಯರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳೆಯರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ, ಜಗಳೂರು, ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 22 ಅಂಗನವಾಡಿ ಕಾರ್ಯಕರ್ತೆ ಹಾಗೂ 183 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್  ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ .ಆಸಕ್ತ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಸಂಬAಧಿತ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿನ ಟೆಂಡರ್ ಬಾಕ್ಸ್ ನಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿಯ ದೂ.ಸಂ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ದಾವಣಗೆರೆ. ದೂ.ಸಂ:08192-263219, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹರಿಹರ. ದೂ.ಸಂ:08192-241431, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಗಳೂರು.   ದೂ.ಸಂ:08196-227132, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಚನ್ನಗಿರಿ.ದೂ.ಸಂ:08189-295455, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹೊನ್ನಾಳಿ ಮತ್ತು ನ್ಯಾಮತಿ ದೂ.ಸಂ: 08188-251283 ಸಂಪರ್ಕಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular