ಬೆಂಗಳೂರು: ತಡರಾತ್ರಿ ಸುರಿದ ಭಾರಿ ಮಳೆಗೆ ಹೆದ್ದಾರಿ ಕಾಣದೆ ಕಾರ್ ಅಪಘಾತಕ್ಕೀಡಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡ ಹುಲ್ಲೂರು ಗ್ರಾಮದ ಸಮೀಪ ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ಘಟನೆ ನಡೆದಿದೆ.
ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಮರ್ಸಿಡೆಸ್ ಬೆಂಜ್ ಕಾರ್ ನಜ್ಜುಗುಜ್ಜಾಗಿದೆ. ಘಟನೆ ಬಳಿಕ ಕಾರ್ ಚಾಲಕ ಪರಾರಿಯಾಗಿದ್ದು, ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ.
ತಮಿಳುನಾಡು ನೋಂದಣಿಯ ಮರ್ಸಿಡಿಸ್ ಬೆಂಜ್ ಕಾರ್ ಅಪಘಾತಕ್ಕೀಡಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

