ಬೆಂಗಳೂರು: ಬೈಕ್ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಂಗೇರಿಯ ಆರ್.ಆರ್. ಡೆಂಟಲ್ ಕಾಲೇಜು ಬಳಿ ನಡೆದಿದೆ.
ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಗೌರಿಶಂಕರ್ ಮತ್ತು ಅತುಲ್ ಸಾವನ್ನಪ್ಪಿದ್ದಾರೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಇಬ್ಬರು ಬೈಕ್ ನಲ್ಲಿ ಬರುತ್ತಿದ್ದರು. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

