HomeKarnatakaಸಚಿವ ಸ್ಥಾನ ಕೇಳುವುದು ಸ್ವಾಭಾವಿಕ, ಅದು ಪ್ರಜಾಪ್ರಭುತ್ವದ ಸೌಂದರ್ಯ: ಯು.ಟಿ. ಖಾದರ್

ಸಚಿವ ಸ್ಥಾನ ಕೇಳುವುದು ಸ್ವಾಭಾವಿಕ, ಅದು ಪ್ರಜಾಪ್ರಭುತ್ವದ ಸೌಂದರ್ಯ: ಯು.ಟಿ. ಖಾದರ್

ಹಾಸನ: ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು, ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಮಾತನಾಡಿದ ಅವರು, ಯಾವುದೇ ಅಸಮಾಧಾನ ಎಲ್ಲಿಯೂ ಕೂಡ ಇಲ್ಲ. ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳು ಕೇಳುವುದು ಸ್ವಾಭಾವಿಕ. ಅಭಿಮಾನಿಗಳು ಕೇಳಬೇಕು, ಅದು ಪ್ರಜಾಪ್ರಭುತ್ವದ ಸೌಂದರ್ಯ. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಪಕ್ಷದ ಹಿರಿಯ ನಾಯಕರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ಬಗ್ಗೆ ನಾಯಕರು ತೀರ್ಮಾನಿಸುತ್ತಾರೆ. ಯಾವುದೇ ಗೊಂದಲವಿಲ್ಲ. ಸರ್ಕಾರ ಚೆನ್ನಾಗಿ ಕೆಲಸ ನಿರ್ವಹಿಸುತ್ತಿದೆ. ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿ ಜನರ ವಿಶ್ವಾಸ ಗಳಿಸುತ್ತದೆ. ಕಾಂಗ್ರೆಸ್ ಪಕ್ಷ ಅದಕ್ಕೆ ಸಂಪೂರ್ಣ ಬೆಂಬಲ ಕೊಡುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಸ್ಪೀಕರ್ ಆಯ್ಕೆ ವಿಚಾರದ ಬಗ್ಗೆ ಪಕ್ಷದ ಹಿರಿಯರು ತೀರ್ಮಾನ ಮಾಡುತ್ತಾರೆ. ಉತ್ತಮವಾದ ಸಭಾಧ್ಯಕ್ಷರು ಮತ್ತು ಮಂತ್ರಿಗಳ ಸರ್ಕಾರ ಇರುತ್ತದೆ. ನಾವು ಶಾಸಕರು, ಪ್ರತಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅತ್ಯುತ್ತಮವಾದ, ಜನ ಮೆಚ್ಚುವ ಆಡಳಿತವನ್ನು ಜನರಿಗೆ ನೀಡುತ್ತೇವೆ ಎಂದು ಯು.ಟಿ. ಖಾದರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular