HomeLatest NewsBIG NEWS: ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರ ಹೋರಾಟ: ಬಿಜೆಪಿ-ಜೆಡಿಎಸ್ ನಿಂದ ಬೆಂಬಲ: ಜೂನ್...

BIG NEWS: ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರ ಹೋರಾಟ: ಬಿಜೆಪಿ-ಜೆಡಿಎಸ್ ನಿಂದ ಬೆಂಬಲ: ಜೂನ್ 20ರಂದು ಬೃಹತ್ ಪ್ರತಿಭಟನೆ

ರಾಮನಗರ: ರೈತರ ಭಾರಿ ವಿರೋಧದ ನಡುವೆಯೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಜಾರ ಬಿಡದಿ ಟೌನ್ ಶಿಪ್ ಯೋಜನೆಗೆ ಮುಂದಾಗಿದ್ದು, 500 ಎಕರೆ ಭೂಸ್ವಾದೀನ ಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಇದರ ಬೆನ್ನಲ್ಲೇ ರೈತರ ಪ್ರತಿಭಟನೆ ಭುಗಿಲೆದ್ದಿದೆ. ರೈತರ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಕೂಡ ಸಾಥ್ ನೀಡಿವೆ.

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವಿಪಕ್ಷಗಳ ನಡುವೆ ಈಗಾಗಲೇ ಜಟಾಪಟಿ ಆರಂಭವಾಗಿದೆ. ರೈತರ ತೀವ್ರ ವಿರೋಧದ ನಡುವೆಯೂ, ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 516 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ಇಪಕ್ಷಗಳನ್ನು ಕೆರಳಿಸಿದೆ. ಈ ಯೋಜನೆಗೆ ಸುಮಾರು 18,133 ಕೋಟಿ ರೂ. ವೆಚ್ಚವಾಗುವ ಅಂದಾಜಿದೆ.

ಭೂಮಾಲೀಕರಿಗೆ ನಗದು ಪರಿಹಾರ ಅಥವಾ ಅಭಿವೃದ್ಧಿಪಡಿಸಿದ ನಿವೇಶನ ನೀಡುವ ಯೋಜನೆಯಿದೆ. ಆದರೆ, ಈ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ತಮ್ಮಅನುಮತಿ ನೀಡಿಲ್ಲ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಸಾಧ್ಯವಿಲ್ಲ ಎಂದಿರುವ ವಿರೋಧ ಪಕ್ಷಗಳು, ಇದು ರೈತ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿವೆ. ಈಗಾಗಲೇ ರೈತರು ಆರಂಭಿಸಿರುವ ಹೋರಾಟಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬೆಂಬಲ ಘೋಷಿಸಿದ್ದಾರೆ. ಸರ್ಕಾರದ ಕ್ರಮವನ್ನು ದಬ್ಬಾಳಿಕೆ ಎಂದು ಕಿಡಿಕಾರಿರುವ ಅವರು ಹೋರಾಟಕ್ಕೆ ತಾವೂ ಬರುವುದಾಗಿ ತಿಳಿಸಿದ್ದಾರೆ. ಜೆಡಿಎಸ್ ಬೆನ್ನಲ್ಲೇ ಬಿಜೆಪಿ ಕೂಡ ರೈತರ ಪರ ನಿಂತಿದೆ. ಎರಡೂ ಪಕ್ಷಗಳು ರೈತರ ಹೋರಾಟಕ್ಕೆ ಬೆಂಬಲ ನೀಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ಭೂಸ್ವಾಧೀನ ನಿರ್ಧಾರದ ವಿರುದ್ಧ ಜೂನ್ 20ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಹೋರಾಟದಲ್ಲಿ 7-8 ಜಿಲ್ಲೆಗಳ ರೈತರು ಭಾಗವಹಿಸುವ ನಿರೀಕ್ಷೆಯಿದೆ. ಬಿಡದಿ ಟೌನ್‌ಶಿಪ್ ಅನ್ನು ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಎಂದು ಸಹ ಉಲ್ಲೇಖಿಸಲಾಗುತ್ತಿದ್ದು, ಇದು ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಸಂಘರ್ಷಕ್ಕೆ ಕಾರಣವಾಗಿದೆ. ಒಟ್ಟಾರೆ ಸರ್ಕಾರದ ವಿರುದ್ಧ ಜೂನ್ 20ರಂದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular