HomeLatest NewsBIG NEWS: ಪರಿಹಾರ ನೀಡದ್ದಕ್ಕೆ ಆಕ್ರೋಶ: ಬಿಟಿಡಿಎ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ರೈತ

BIG NEWS: ಪರಿಹಾರ ನೀಡದ್ದಕ್ಕೆ ಆಕ್ರೋಶ: ಬಿಟಿಡಿಎ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ರೈತ

ಬಾಗಲಕೋಟೆ: ಭೂ ಪರಿಹಾರ ನೀಡದೇ ನಾಲ್ಕು ವರ್ಷಗಳಿಂದ ಸತಾಯಿಸುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿಯ ಸಿಬ್ಬಂದಿಗೆ ರೈತನೋರ್ವ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದೆ.

ಮುಳುಗಡೆ ಭೂಮಿಗೆ ಕಳೆದ ನಾಲ್ಕು ವರ್ಷಗಳಿಂದ ಸೂಕ್ತ ಪರಿಹಾರ ಸಿಗದೆ ಬೇಸತ್ತ ರೈತ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ನುಗ್ಗಿ, ನೌಕರನೊಬ್ಬನಿಗೆ ಚಪ್ಪಲಿಯಿಂದ ಥಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲೇ ಈ ಹೈಡ್ರಾಮಾ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಒಂದು ವರ್ಷದಿಂದ 15 ಜನ ಸಫಾಯಿ ಕರ್ಮಚಾರಿಗಳಿಗೆ ಸೈಟ್ ಮಂಜೂರು ಮಾಡಿಲ್ಲ ಎಂದು ಆಗ್ರಹಿಸಿ ಡಿಎಸ್‌ಎಸ್‌ ಹೋರಾಟಗಾರರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಈ ಮುತ್ತಿಗೆಯ ವೇಳೆ ಕಚೇರಿಗೆ ಆಗಮಿಸಿದ ರೈತ ಬಸಪ್ಪ ದೊಡಮನಿ ಎಂಬುವವರು ಡಿಎಸ್‌ಎಸ್‌ ಮುಖಂಡರ ಎದುರೇ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ನನ್ನ ಭೂಮಿ ಮುಳುಗಡೆಯಾಗಿ ನಾಲ್ಕು ವರ್ಷಗಳೇ ಕಳೆದರೂ ಬಿಟಿಡಿಎ ಅಧಿಕಾರಿಗಳು ಈವರೆಗೆ ನನಗೆ ಭೂ ಪರಿಹಾರ ನೀಡಿಲ್ಲ. ಪರಿಹಾರಕ್ಕಾಗಿ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಬಸಪ್ಪ ದೊಡಮನಿ ಆಕ್ರೋಶ ಹೊರಹಾಕುತ್ತಿದ್ದಂತೆ, ಅಲ್ಲಿಯೇ ಇದ್ದ ಬಿಟಿಡಿಎ ಹಿರಿಯ ಸಹಾಯಕ ಹಾಗೂ ಟೈಪಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ನೀಲಕಂಠ ಅಂಕದ್ ಮತ್ತು ರೈತನ ಮಧ್ಯೆ ತೀವ್ರ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು ಕೋಪಗೊಂಡ ರೈತ ಬಸಪ್ಪ, ತಕ್ಷಣವೇ ತಮ್ಮ ಕಾಲಿನಲ್ಲಿದ್ದ ಚಪ್ಪಲಿಯನ್ನು ತೆಗೆದುಕೊಂಡು ಟೈಪಿಸ್ಟ್ ನೀಲಕಂಠ ಅವರಿಗೆ ಎಲ್ಲರ ಎದುರೇ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕಚೇರಿಯಲ್ಲೇ ಸರ್ಕಾರಿ ನೌಕರನ ಮೇಲೆ ರೈತ ಚಪ್ಪಲಿಯಿಂದ ಹೊಡೆದ ಬೆನ್ನಲ್ಲೇ ಬಿಟಿಡಿಎ ಕಚೇರಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಸ್ತುತ ಈ ಘಟನೆಗೆ ಸಂಬಂಧಿಸಿದಂತೆ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular