ಮಂಡ್ಯ: ಮನೆ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ನೀರಿನ ಸಂಪ್ಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಆಕಸ್ಮಿಕವಾಗಿ ನೀರಿನ ಸಂಪ್ಗೆ ಬಿದ್ದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

