HomeKarnatakaBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು:...

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯನ್ನು ನಾವು ನಿಲ್ಲಿಸಲು ಹೋಗಲ್ಲ. ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು. ಗೃಹಜ್ಯೋತಿಗೂ ಕೂಡ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಪಂ ಸಿಇಒಗಳ ಜೊತೆಗೆ ಸಭೆ ನಡೆಸಿದ ಸಿಎಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

 ರಾಜ್ಯದ ಜನರು ನಮ್ಮ ಮೇಲೆ ಬಹಳ ನಿರೀಕ್ಷೆಗಳನ್ನು ಇಟ್ಟಿದ್ದಾರೆ. ಕಚೇರಿಗಳಿಗೆ ಬಂದ ಜನರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಿಗ್ಗೆ 10 ಗಂಟೆಗೆ ಅಧಿಕಾರಿಗಳು ಕಚೇರಿಗೆ ಹಾಜರಾಗಬೇಕು. ಹಾಜರಾದ ಕೂಡಲೇ ಮೆಸೇಜ್ ಕಳಿಸಬೇಕು. ತಾಲೂಕು ಮಟ್ಟದಲ್ಲೂ ಅಧಿಕಾರಿಗಳ ಹಾಜರಾತಿ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಎಸ್ಐಆರ್ ಪ್ರಾರಂಭವಾಗುತ್ತಿದೆ. ಮತ ಉಳಿಸಿಕೊಳ್ಳಬೇಕಾದರೆ ಅರ್ಜಿ ಫಾರಂ ತುಂಬಬೇಕು. ಅರ್ಜಿ ಫಾರಂ ತುಂಬಿದರೆ ಮಾತ್ರ ಮತ ಉಳಿಯುತ್ತದೆ. ಮೂರು ಸಲ ಬಿಎಲ್ಒ ಗಳು ನಿಮ್ಮ ಮನೆಗೆ ಬರುತ್ತಾರೆ. ಎಲ್ಲಾ ದಾಖಲೆಗಳನ್ನು ನೀಡಿ ಅರ್ಜಿ ತುಂಬಿ ಪ್ರತಿಯೊಬ್ಬ ಮತದಾರರು ತಮ್ಮ ಮತಗಳನ್ನು ಉಳಿಸಿಕೊಳ್ಳಲಿ. ಮತದಾನದ ಹಕ್ಕು ಕಳೆದುಕೊಂಡರೆ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ. ಸರ್ಕಾರಿ ಸೌಲಭ್ಯಗಳು ಸಿಗುವುದು ಕಷ್ಟವಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯನ್ನು ನಾವು ನಿಲ್ಲಿಸಲು ಹೋಗುವುದಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು. ಗೃಹಜ್ಯೋತಿಗೂ ಕೂಡ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಬೇಕು ಅಷ್ಟೇ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular