HomeKarnatakaBREAKING: ಮುಡಾದ 50:50 ಹಂಚಿಕೆ ನಿವೇಶನಗಳನ್ನು ದಯವಿಟ್ಟು ಯಾರೂ ಖರೀದಿಸಬೇಡಿ: ಸ್ನೇಹಮಯಿ ಕೃಷ್ಣ ಎಚ್ಚರಿಕೆ

BREAKING: ಮುಡಾದ 50:50 ಹಂಚಿಕೆ ನಿವೇಶನಗಳನ್ನು ದಯವಿಟ್ಟು ಯಾರೂ ಖರೀದಿಸಬೇಡಿ: ಸ್ನೇಹಮಯಿ ಕೃಷ್ಣ ಎಚ್ಚರಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ 50:50 ನಿವೇಶನಗಳನ್ನು ಯಾರೂ ಖರೀದಿಸಬೇಡಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ಮುಡಾದ 50:50 ನಿವೇಶನಗಳನ್ನು ಖರೀದಿಸಿ ಮೋಸ ಹೋಗಬೇಡಿ. 50:50 ಅನುಪಾತದಲ್ಲಿ ಹಂಚಿಕೆಯಾದ ನಿವೇಶನ ಖರೀದಿಸದಂತೆ ಮನವಿ ಮಾಡಿದ್ದಾರೆ. ನಿವೇಶನ ಖರೀದಿಸಿದರೆ ಮೋಸ, ನಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈಗಾಗಲೇ ನಿವೇಶನ ಖರೀದಿಸಿದವರು ಮನೆ ನಿರ್ಮಾಣ ಮಾಡದಂತೆ ಸಲಹೆ ನೀಡಿದ್ದಾರೆ. ಅಕ್ರಮ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಎರಡು ತನಿಖಾ ಸಂಸ್ಥೆಗಳಿಂದ ತನಿಖೆ ಕೈಗೊಳ್ಳಲಾಗಿದೆ. ತಮ್ಮ ದೂರಿನ ಆಧಾರದಲ್ಲಿ ಮುಡಾ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ನಿವೇಶನಗಳನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಮುಡಾದ 50:50 ನಿವೇಶನಗಳನ್ನು ಯಾರೂ ಖರೀದಿಸಬೇಡಿ ಎಂದು ಜಾಲತಾಣದ ಮೂಲಕ ಸಾರ್ವಜನಿಕರಿಗೆ ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಮೈಸೂರು ‌ನಗರಾಭಿವೃದ್ದಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಹಂಚಿಕೆ ಮಾಡಿರುವ ನಿವೇಶನಗಳನ್ನು ದಯವಿಟ್ಟು ಯಾರೂ ಖರೀದಿಸಿ, ಮೋಸ ಹೋಗಬೇಡಿ, ನಷ್ಟ ಅನುಭವಿಸಬೇಡಿ ಮತ್ತು ಈಗಾಗಲೇ ಖರೀದಿಸಿರುವವರು ಮನೆ ಕಟ್ಟಿಬಿಟ್ಟರೆ ವಶ ಪಡಿಸಿಕೊಳ್ಳುವುದಿಲ್ಲ ಎಂಬ ಕಾರಣದಿಂದ ಮನೆ ಕಟ್ಟಬೇಡಿ. 50:50 ಅನುಪಾತದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿರುವುದರಿಂದ, ನನ್ನ ದೂರರ್ಜಿ ಆಧರಿಸಿ ಎರಡು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದರಿಂದ, ಕಾನೂನಿನ ಪ್ರಕಾರ, ಸದರಿ ನಿವೇಶನಗಳನ್ನು ವಶಕ್ಕೆ ಪಡೆಯಲಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

https://www.facebook.com/photo/?fbid=27376297522059161&set=a.150689265046688

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular