ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಕ್ಕಳೂ ಸೇರಿ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಭಕ್ತರನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ರಸ್ತೆ ಬದಿಯ ಬಾವಿಗೆ ಉರುಳಿಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರಲ್ಲಿ ಮಕ್ಕಳು ಸಹ ಸೇರಿದ್ದಾರೆ.
ಅಪಘಾತ ಹೇಗೆ ನಡೆದಿದೆ?
ಮಲ್ಶಿರಾಸ್ ತಾಲ್ಲೂಕಿನ ಮಹಸ್ವಾಡ್–ಪಾಂಢರಪುರ ರಸ್ತೆಯ ತಾಂದುಳವಾಡಿ ಗ್ರಾಮದ ಸಮೀಪ ಈ ಘಟನೆ ಮಧ್ಯಾಹ್ನ ಸಂಭವಿಸಿದೆ. ಪಾಂಢರಪುರ ತಾಲ್ಲೂಕಿನ ರಂಜನಿ ಗ್ರಾಮದ ಭಕ್ತರು ಸಿದ್ಧನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾಪಸ್ ಬರುತ್ತಿದ್ದಾಗ ಈ ದುರಂತ ನಡೆದಿದೆ.
ಗಾಯಾಳುಗಳಿಗೆ ಚಿಕಿತ್ಸೆ
ಅಪಘಾತದಲ್ಲಿ ಗಾಯಗೊಂಡ ಐದು ಮಂದಿಯನ್ನು ಪಾಂಢರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ವಾಹನ ನೇರವಾಗಿ ಬಾವಿಗೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ. ಪಂಢರಪುರದ 15 ಮಂದಿಯ ತಂಡವು ಮಾಸ್ವಾಡ್ನ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ತಂಡುಲ್ವಾಡಿ ಗ್ರಾಮದ ಬಳಿ, ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ರಸ್ತೆಬದಿಯ ತೆರೆದ ಬಾವಿಗೆ ಬಿದ್ದಿದೆ.ಈ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ.
ಸರ್ಕಾರದ ಪ್ರತಿಕ್ರಿಯೆ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

