ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣನಗರದ ಎಸಿಎಫ್ ನಿವಾಸದಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಚಿಕ್ಕಮಗಳೂರು ಎಸಿಎಫ್ ಮೋಹನ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣನಗರದ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಅವರ ನಿವಾಸ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದೆ.
ಮೋಹನ್ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆ, ಆಸ್ತಿ ವಿವರ ಪರಿಶೀಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

