HomeEntertainmentBREAKING: ನಟ ಶ್ರೀಮುರುಳಿ, ವಿಜಯ್ ರಾಘವೇಂದ್ರರ ತಾಯಿ ಜಯಮ್ಮ ಚಿನ್ನೇಗೌಡ ವಿಧಿವಶ

BREAKING: ನಟ ಶ್ರೀಮುರುಳಿ, ವಿಜಯ್ ರಾಘವೇಂದ್ರರ ತಾಯಿ ಜಯಮ್ಮ ಚಿನ್ನೇಗೌಡ ವಿಧಿವಶ

ಬೆಂಗಳೂರು: ಹಿರಿಯ ಚಿತ್ರ ನಿರ್ಮಾಪಕ ಚಿನ್ನೇಗೌಡರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರುಳಿ ಅವರ ತಾಯಿ ಜಯಮ್ಮ ಚಿನ್ನೇಗೌಡ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಜಯಮ್ಮ ಚಿನ್ನೆಗೌಡ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ನಿರ್ಮಾಪಕ ಚಿನ್ನೇಗೌಡರ ಪತ್ನಿ ಜಯಮ್ಮ ಚಿನ್ನೇಗೌಡ ಅವರು ‘ಸೇವಂತಿ ಸೇವಂತಿ’, ‘ಖುಷಿ’, ‘ಗಣೇಶ ಮತ್ತೆ ಬಂದ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಒಂದು ವಾರದಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular