HomeKarnatakaರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್

ರಾಯಚೂರು: ಅಪ್ರಾಪ್ತ ಅಕ್ಕ-ತಂಗಿಯರಿಬ್ಬರ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿರುವ ಘಟನೆ ರಾಅಯಚೂರು ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

8 ಹಾಗೂ 9 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಬಾಲಕಿಯರ ಕುಟುಂಬಕ್ಕೆ ಪರಿಚಯಸ್ಥ ವ್ಯಕ್ತಿಯಿಂದಲೇ ಈ ಕೃತ್ಯ ನಡೆದಿದೆ. ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುವ 30 ವರ್ಷದ ಆರೋಪಿ ಇಬ್ಬರು ಸಹೋದರಿಯರ ಮೇಲೆ ಶೆಡ್ ನಲ್ಲಿ ಅತ್ಯಾಚಾರವೆಸಗಿದ್ದಾನೆ.

ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಾಬಾ ಎಂದು ಗುರುತಿಸಲಾಗಿದೆ. ಬಾಲಕಿಯರ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಅವರ ಶೆಡ್‌ಗೆ ಬಂದು ಕೃತ್ಯ ಎಸಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ, ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular