HomeKarnatakaಶಾಲೆಯ ಕೊಠಡಿ, ಶೌಚಾಲಯ ಬಳಿ ಕರೆದೊಯ್ದು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಧರ್ಮದೇಟು

ಶಾಲೆಯ ಕೊಠಡಿ, ಶೌಚಾಲಯ ಬಳಿ ಕರೆದೊಯ್ದು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಧರ್ಮದೇಟು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಪೋಷಕರು ಥಳಿಸಿದ ಘಟನೆ ನಡೆದಿದೆ.

ಚಿಕ್ಕೋಡಿ ಪಟ್ಟಣದ ಶಾಲೆಯೊಂದರ ಶಿಕ್ಷಕ ಶ್ರೀಶೈಲ ಕುಂಬಾರ ವಿರುದ್ಧ ಹಲವು ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಕನ್ನಡ ವಿಷಯದಲ್ಲಿ ಪಾಸ್ ಮಾಡುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಶಾಲೆಯ ಕೊಠಡಿ ಮತ್ತು ಶೌಚಾಲಯದ ಬಳಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸುತ್ತಿದ್ದ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ಪ್ರಶ್ನಿಸಿದ್ದಾರೆ. ಆಕ್ರೋಶದಿಂದ ಶಿಕ್ಷಕನನ್ನು ಥಳಿಸಿದ್ದಾರೆ. ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮಾಹಿತಿ ತಿಳಿದು ಚಿಕ್ಕೋಡಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕೋಡಿ ಡಿಡಿಪಿಐ ಸೀತಾರಾಮು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪೋಷಕರು ಮತ್ತು ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದಿದ್ದಾರೆ. ಚಿಕ್ಕೋಡಿ ಬಿಇಒ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular