HomeLatest Newsಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗೆ ಅಶ್ಲೀಲ ನಿಂದನೆ: ದೂರು ದಾಖಲು

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗೆ ಅಶ್ಲೀಲ ನಿಂದನೆ: ದೂರು ದಾಖಲು

ಶಿವಮೊಗ್ಗ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಏಕವಚನದಲ್ಲಿ ನಿಂದಿಸಿದ ಆರೋಪದ ಮೇಲೆ ಎಂ.ಎನ್. ಗಣೇಶ್ ಎಂಬ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಆರ್.ಎಸ್.ಎಸ್. ಕುರಿತಾಗಿ ಸಾರ್ವಜನಿಕವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೀಡಿದ ಹೇಳಿಕೆಯ ಸಂದರ್ಭದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿತ್ತು. ಈ ಕುರಿತಾಗಿ ಎಂ.ಎಸ್. ಗಣೇಶ್ ಎಂಬ ವ್ಯಕ್ತಿ ಅಶ್ಲೀಲವಾಗಿ ಕಿಮ್ಮನೆ ರತ್ನಾಕರ್ ಅವರನ್ನು ಏಕವಚನದಲ್ಲಿ ನಿಂದಿಸಿದ್ದು, ಸೂಕ್ತ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ತಾಲೂಕು ಕಾಂಗ್ರೆಸ್ ಇಂಟೆಕ್ ಘಟಕದ ಅಧ್ಯಕ್ಷ ಪ್ರೇಮಚಂದ್ರ ಯಡೂರು ನೇತೃತ್ವದಲ್ಲಿ ದೂರು ನೀಡಲಾಗಿದೆ.

ಈ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲೂಕು ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಹೊಸ್ಕೇರಿ ರವಿಕುಮಾರ್, ನಗರ ಘಟಕದ ಅಧ್ಯಕ್ಷ ಶ್ರೇಯಸ್ ರಾವ್, ಜಯಕರ ಶೆಟ್ಟಿ, ಫಣಿರಾಜ್ ಕಟ್ಟೆಹಾಕ್ಕಲು, ಪ್ರಶಾಂತ್ ಸಾಲ್ಯಾನ್, ಸಂದೀಪ್, ಮಹೇಂದ್ರ ಇತರರು ಇದ್ದರು,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular