HomeKarnatakaಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಡ್ತಿಗೆ ಅಂಕಿತ: ರಾಜ್ಯದ 232 ತಹಸೀಲ್ದಾರರಿಗೆ ಗ್ರೇಡ್ 1 ಹುದ್ದೆಗೆ...

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಡ್ತಿಗೆ ಅಂಕಿತ: ರಾಜ್ಯದ 232 ತಹಸೀಲ್ದಾರರಿಗೆ ಗ್ರೇಡ್ 1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಹಸೀಲ್ದಾರರ ಬಡ್ತಿಗೆ ಅಂಕಿತ ಹಾಕಲಾಗಿದೆ. 232 ಗ್ರೇಡ್ 2 ತಹಸೀಲ್ದಾರ್ ಅಧಿಕಾರಿಗಳಿಗೆ ಗ್ರೇಡ್ 1 ತಹಸೀಲ್ದಾರ್ ಹುದ್ದೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆ 2001ರ ಜುಲೈನಲ್ಲಿ ಗ್ರೇಡ್ 2 ವೃಂದದಿಂದ ಗ್ರೇಡ್ 1 ವೃಂದಕ್ಕೆ ಮುಂಬಡ್ತಿ ನೀಡಲು ಆದೇಶ ಹೊರಡಿಸಿದ್ದು, ಇದರ ವಿರುದ್ಧ ಕೆಲವರು ಕೆಎಟಿ ಮೊರೆ ಹೋಗಿದ್ದರು. ಜೇಷ್ಠತಾ ಪಟ್ಟಿ ಪರಿಷ್ಕರಣೆಗೆ ನ್ಯಾಯಾಲಯ ಆದೇಶ ನೀಡಿತ್ತು.

ಇದರಂತೆ 2024 ರಲ್ಲಿ ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿತ್ತು. ಇದೀಗ 2026ರ ಜೂನ್ 2 ರಂದು ಗ್ರೇಡ್ 2 ತಹಸೀಲ್ದಾರ್ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿತ್ತು. ಇದರಂತೆ ಜೂನ್ 17ರಂದು 232 ಮಂದಿ ಅಧಿಕಾರಿಗಳಿಗೆ ತಹಸೀಲ್ದಾರ್ ಗ್ರೇಡ್ 1 ವೃಂದಕ್ಕೆ ಮುಂಬಡ್ತಿ ನೀಡಿ ಆದೇಶಿಸಲಾಗಿದೆ. ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಅನೇಕ ಅಧಿಕಾರಿಗಳು ಕಾಯುತ್ತಿದ್ದರು. ಇದೀಗ 232 ತಹಸೀಲ್ದಾರ್ ಗಳಿಗೆ ಗ್ರೇಡ್ 1 ಹುದ್ದೆಗೆ ಬಡ್ತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular