ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
1ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಆಸಕ್ತರು ರಾಜ್ಯ ವಿದ್ಯಾರ್ಥಿ ವೇತನ ಫೋರ್ಟಲ್ನ ಲಿಂಕ್ https://ssp.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ, ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು ‘ಆಟೋ ರಿನ್ಯೂವಲ್’ ಎಂದು ಪರಿಗಣಿಸಲಾಗುವುದರಿಂದ ಇಂತಹ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಆದರೆ, ಕಳೆದ ವರ್ಷ ಅರ್ಜಿ ಸಲ್ಲಿಸಿಯೂ ವಿದ್ಯಾರ್ಥಿವೇತನ ಮಂಜೂರಾಗದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಈ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI ಮ್ಯಾಪಿಂಗ್ ಸಕ್ರಿಯವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ/ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಡಿಪ್ಲೋಮಾ ಕೃಷಿ ಕೋರ್ಸ್ಗೆ ಅರ್ಜಿ ಆಹ್ವಾನ
ಪ್ರಸಕ್ತ(2026-27) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು,ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 12.06.2026 ಎಂದು ಅಧಿಸೂಚನೆ ಹೊರಡಿಸಲಾಗಿತ್ತು.ಮುಂದುವರಿದು, ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಜುಲೈ, 03 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್ಸೈಟ್ನಿಂದ ಡೌನ್ಲೋಡ್ ಮಾಡಬಹುದು. ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಜುಲೈ, 03 ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/ ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪೆÇ್ಲೀಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇμÉ್ಮಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಕೃಷಿ ರಂಗದ ಪ್ರಾಯೋಗಿಕ ಪರಿಚಯ/ ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
ಹೆಚ್ಚಿನ ವಿವರಗಳಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ, ಕರ್ನಾಟಕ, ಕಾಲೇಜು ಮತ್ತು ವಿಳಾಸ ಪ್ರಾಂಶುಪಾಲರು, ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ 576213, ಉಡುಪಿ ಜಿಲ್ಲೆ. ದೂರವಾಣಿ 9108241342, 9686405090, 8884141445 ನ್ನು ಸಂಪರ್ಕಿಸಬಹುದು.

