HomeKarnatakaಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳ ಗೆಲುವು ಖಚಿತ: ಇಂದು ಸಂಜೆ ವಿಜಯೋತ್ಸವ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳ ಗೆಲುವು ಖಚಿತ: ಇಂದು ಸಂಜೆ ವಿಜಯೋತ್ಸವ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದೂ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ್ದಾರೆ. ಅದರ ಫಲವಾಗಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಸ್ಪಷ್ಟ ಗೆಲುವು ದೊರೆಯಲಿದೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜೆಡಿಎಸ್‌ನವರು ಕಾಂಗ್ರೆಸ್ ಪಕ್ಷದ ಹತ್ತಿರಕ್ಕೂ ಬರಲು ಸಾಧ್ಯವಿಲ್ಲ. ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ನ ಐವರು ಅಭ್ಯರ್ಥಿಗಳು ಜಯಗಳಿಸಲಿದ್ದು, ಅದರ ಅಂಗವಾಗಿ ಇಂದು ಸಂಜೆ ವಿಜಯೋತ್ಸವ ಆಚರಿಸಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular