HomeKarnatakaBIG NEWS: ಪರಿಷತ್ ಚುನಾವಣೆಯ ಮತದಾನದ ವೇಳೆ ನಡೆದ ಸ್ವಾರಸ್ಯಕರ ಘಟನೆಗಳು

BIG NEWS: ಪರಿಷತ್ ಚುನಾವಣೆಯ ಮತದಾನದ ವೇಳೆ ನಡೆದ ಸ್ವಾರಸ್ಯಕರ ಘಟನೆಗಳು

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಮುಕ್ತಾಯಗೊಂಡಿದ್ದು, ಎಲ್ಲ 222 ಶಾಸಕರಿಂದ ಮತದಾನ ನಡೆದಿದೆ. ಮತದಾನದ ವೇಳೆ ಕೆಲ ಸ್ವಾರಸ್ಯಕರ ಘಟನೆಗಳು ನಡೆದಿದ್ದು, ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ.

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೊದಲನೇ ಮತ ಚಲಾಯಿಸಿದ್ದರೆ, ಯಲಬುರ್ಗಾ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಕೊನೆಯದಾಗಿ ಮತ ಹಾಕಿದ್ದಾರೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರೂ ಪಕ್ಷಗಳಿಗೂ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ಕಾಂಗ್ರೆಸ್ ನಾಯಕರ ಜೊತೆ ಬಿಜೆಪಿ ಉಚ್ಛಾಟಿತ ಶಾಸಕರು ಪ್ರತ್ಯಕ್ಷ:
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕರಾದ ಎಸ್​​.ಟಿ. ಸೋಮಶೇಖರ್​​ ಮತ್ತು ಶಿವರಾಮ ಹೆಬ್ಬಾರ್​​ ಚುನಾವಣೆ ವೇಳೆ ಕಾಂಗ್ರೆಸ್​​ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದು ಕುತೂಹಲ ಮೂಡಿಸಿದೆ. ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಬಳಿಕ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ನಾಯಕರಿದ್ದ ಕೊಠಡಿಯಲ್ಲಿ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕೂಡ ಉಪಸ್ಥಿತರಿರ್ಯ್ವ ಮೂಲಕ ಅಚ್ಚರಿ ಮೂಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸಿಎಂ ಪರಮೇಶ್ವರ್ ಗಾಗಿ ಕಾದು ಸುಸ್ತಾದ ಸಿಎಂ ಡಿ.ಕೆ.ಶಿವಕುಮಾರ್:

ಡಿಸಿಎಂ ಡಾ.ಜಿ.ಪರಮೇಶ್ವರ್​​ ಜೊತೆ ಮತಚಲಾಯಿಸಲೆಂದು ಕಾದು ಕಾದು ಕೊನೆಗೆ ಸಿಎಂ ಡಿ.ಕೆ. ಶಿವಕುಮಾರ್​ ಒಬ್ಬರೇ ತೆರಳಿ ಮತ ಚಲಾಯಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಡಾ.ಪರಮೇಶ್ವರ್ ವಿಧಾನಸೌಧಕ್ಕೆ ಬರುತ್ತಾರೆ ಎನ್ನಲಾಗಿತ್ತಾದರೂ 1.30 ಕಳೆದರೂ ಬಂದಿರಲಿಲ್ಲ. ಅನಾರೋಗ್ಯದ ಹಿನ್ನೆಲೆ ತಡವಾಗಿ ಪರಮೇಶ್ವರ್​​ ಆಗಮಿಸಿದ್ದು, ಮಾಸ್ಕ್‌ ಹಾಕಿಕೊಂಡು ಬಂದೇ ವೋಟ್​​ ಮಾಡಿದ್ದಾರೆ.

ಯತ್ನಾಳ್​​ ಮತದಾನದ ವೇಳೆ ಹೈಡ್ರಾಮಾ:
ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್​​ ಮತ ಹಾಕಲು ಬಂದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಯತ್ನಾಳ್‌ ಮತ ಹಾಕಲು ಬಂದಾಗ ಮತಕೇಂದ್ರದಲ್ಲಿದ್ದ ಕಾಂಗ್ರೆಸ್​​ನ ಉಗ್ರಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಮತ ಹಾಕುವ ಬಗ್ಗೆ ಅವರು ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಹೀಗಾಗಿ ಅವರ ಮತವನ್ನು ಮತಪೆಟ್ಟಿಗೆಗೆ ಹಾಕಬೇಡಿ ಎಂದು ಚುನಾವಣಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಆದರೆ ಇದನ್ನು ಬಿಜೆಪಿ ಮತಗಟ್ಟೆ ಏಜೆಂಟ್ ಗಳಾದ ಎನ್. ರವಿಕುಮಾರ್ ಮತ್ತು ಕೆ.ಎಸ್. ನವೀನ್ ವಿರೋಧಿಸಿದ್ದು, ಅಂತಿಮವಾಗಿ ಉಗ್ರಪ್ಪ ಆಕ್ಷೇಪವನ್ನು ತಿರಸ್ಕರಿಸಿ ಯತ್ನಾಳ್​​ಗೆ ಮತ ಹಾಕಲು ಚುನಾವಣಾಧಿಕಾರಿ ಅವಕಾಶ ನೀಡಿದ್ದಾರೆ.

ಪ್ರತ್ಯೇಕವಾಗಿ ಬಂದು ಮತ ಚಲಾಯಿಸಿದ ಜಿ.ಟಿ.ದೇವೇಗೌಡ:
ಚುನಾವಣಾ ಅಖಾಡಕ್ಕಿಳಿಸಿರುವ ಏಕೈಕ ಅಭ್ಯರ್ಥಿಯ ಗೆಲುವಿಗೆ ಜೆಡಿಎಸ್​​ ನಾನಾ ಕಸರತ್ತು ನಡುವೆ, ಜಿ.ಟಿ.ದೇವೇಗೌಡ ಪ್ರತ್ಯೇಕವಾಗಿ ಬಂದು ಮತ ಚಲಾಯಿಸಿರೋದು ಭಾರಿ ಕುತೂಹಲ ಮೂಡಿಸಿದೆ. ಜಿ.ಟಿ.ದೇವೇಗೌಡ ಮತ ಜೆಡಿಎಸ್​ಗೆ ತಪ್ಪಿರುವ ಸಾಧ್ಯತೆ ಬಗ್ಗೆಯೂ ಚರ್ಚೆಯಾಗುತ್ತಿದೆ.

ವ್ಹೀಲ್​​ ಚೇರ್​​ನಲ್ಲಿ ಬಂದ ಕಾಗವಾಡ ಶಾಸಕ ರಾಜು ಕಾಗೆ:
ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಆರೋಗ್ಯ ಸಮಸ್ಯೆಯ ನಡುವೆಯೂ ವ್ಹೀಲ್​​ ಚೇರ್​​ನಲ್ಲಿ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತ್ತೋರ್ವ ಶಾಸಕ ಇಕ್ಬಾಲ್​​ ಹುಸೇನ್​​ ಕೂಡ ಅನಾರೋಗ್ಯದ ನಡುವೆಯೂ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular