HomeLatest Newsರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 3 ಕೋಟಿ ಹೊಸ ಪಡಿತರ ಚೀಟಿ ವಿತರಿಸಲು ಕೇಂದ್ರ...

ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 3 ಕೋಟಿ ಹೊಸ ಪಡಿತರ ಚೀಟಿ ವಿತರಿಸಲು ಕೇಂದ್ರ ಸರ್ಕಾರ ಅನುಮತಿ

ನವದೆಹಲಿ: ಅರ್ಹ ಫಲಾನುಭವಿಗಳಿಗೆ ಸುಮಾರು ಮೂರು ಕೋಟಿ ಹೆಚ್ಚುವರಿ ಪಡಿತರ ಚೀಟಿಗಳನ್ನು ವಿತರಿಸಲು ಕೇಂದ್ರ ಸರ್ಕಾರ ಅನುಮತಿಸಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸ್ಮಾರ್ಟ್ ವೇರ್ ಹೌಸಿಂಗ್ ವ್ಯವಸ್ಥೆ ಉದ್ಘಾಟಿಸಿ ಅವರು ಮಾತನಾಡಿ, ಕೆಲವು ರಾಜ್ಯ ಸರ್ಕಾರಗಳು 2.21 ಕೋಟಿ ಅನರ್ಹ ಪಡಿತರ ಚೀಟಿಗಳನ್ನು ಪಿಡಿಎಸ್ ಪಟ್ಟಿಯಿಂದ ತೆಗೆದು ಹಾಕುವ ಪ್ರಕ್ರಿಯೆ ನಡೆಸುತ್ತಿದ್ದು, ಇದಾದ ಬಳಿಕ ಅರ್ಹ ಫಲಾನುಭವಿಗಳಿಗೆ ಸುಮಾರು ಮೂರು ಕೋಟಿ ಹೆಚ್ಚುವರಿ ಪಡಿತರ ಚೀಟಿಗಳನ್ನು ವಿತರಿಸಲು ಕೇಂದ್ರ ಸರ್ಕಾರ ಅನುಮತಿಸಿದೆ ಎಂದು ತಿಳಿಸಿದ್ದಾರೆ.

ಆಹಾರ ಸಚಿವಾಲಯವು ಮೃತಪಟ್ಟ ವ್ಯಕ್ತಿಗಳು, ಆದಾಯ ತೆರಿಗೆ ಪಾವತಿದಾರರು, ನಾಲ್ಕು ಚಕ್ರಗಳ ವಾಹನಗಳ ಮಾಲೀಕರು ಸೇರಿದಂತೆ 8.51 ಕೋಟಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯನ್ನು ರಾಜ್ಯಗಳಿಗೆ ಕಳುಹಿಸಿದ್ದು, ಈ 8.51 ಕೋಟಿ ಪಡಿತರ ಚೀಟಿಗಳಲ್ಲಿ ರಾಜ್ಯ ಸರ್ಕಾರಗಳು ತಮ್ಮದೇ ಆದ ಮಾನದಂಡಗಳನ್ನು ಅನುಸರಿಸಿ ಅನರ್ಹರ 2.21 ಕೋಟಿ ಪಡಿತರ ಚೀಟಿಗಳನ್ನು ಹಿಂತೆಗೆದುಕೊಂಡಿವೆ. ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಡಿಜಿಟಲೀಕರಣದಿಂದ ಈ ಕ್ರಮ ಸಾಧ್ಯವಾಗಿದೆ. ಅರ್ಹ ಫಲಾನುಭವಿಗಳನ್ನು ಸೇರಿಸಲು ರಾಜ್ಯಗಳಿಗೆ ಅನುಮತಿ ನೀಡಲಾಗಿದೆ. ವಿವಿಧ ರಾಜ್ಯ ಸರ್ಕಾರಗಳು ಸುಮಾರು ಮೂರು ಕೋಟಿ ಹೆಚ್ಚಿನ ಪಡಿತರ ಚೀಟಿಗಳನ್ನು ಅರ್ಹರಿಗೆ ನೀಡಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ರಾಜ್ಯ ಸರ್ಕಾರಗಳು ಅನರ್ಹ ಫಲಾನುಭವಿಗಳನ್ನು ಇನ್ನೂ ಗುರುತಿಸಿಲ್ಲ. ಆಹಾರ ಧಾನ್ಯಗಳು ಅಗತ್ಯವಿರುವವರಿಗೆ ತಲುಪುವಂತೆ ನೋಡಿಕೊಳ್ಳುವುದು ಕೇಂದ್ರದ ಉದ್ದೇಶವಾಗಿದೆ. ಈಗ ದೇಶದಲ್ಲಿ 79 ಕೋಟಿ ಪಡಿತರ ಚೀಟಿಗಳಿವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ವಿತರಿಸುವ ಗುರಿ ಇದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular