HomeKarnatakaರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ಮಳವಳ್ಳಿ ಶಿವಣ್ಣ, ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ತಿಪ್ಪಣ್ಣಪ್ಪ ಕಮಕನೂರ ಅವರನ್ನು ವಿಧಾನಸೌಧದಲ್ಲಿ ಅಭಿನಂದಿಸಿ, ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಯಾವ ಹೆಜ್ಜೆಯನ್ನಿಟ್ಟು ಮುಂದುವರಿಯುತ್ತಿದ್ದೇವೆಯೋ ಅದಕ್ಕೆ ನಾವೂ ಜೊತೆಗಿದ್ದೇವೆ ಎಂದು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ನಮ್ಮ ಪಕ್ಷದ ಶಾಸಕರೂ ಒಗ್ಗಟ್ಟಾಗಿ ಬೆಂಬಲಿಸಿದ್ದಾರೆ. ನಮಗೆ ಹೆಚ್ಚಿನ ಮತ ನೀಡಿದ ಬೇರೆ ಬೇರೆ ಪಕ್ಷದ ವಿಶ್ವಾಸವನ್ನು ನಾವು ಉಳಿಸಿಕೊಳ್ಳುತ್ತೇವೆ.‌ ನೀವು ನಮಗೆ ನೀಡಿದ ವಿಶ್ವಾಸ ಜನರಿಗೆ ನೀಡಿದ ಶಕ್ತಿ ಎಂದು ತಿಳಿಸಿದ್ದಾರೆ.

ನಮ್ಮ ಪಕ್ಷದ ಶಾಸಕರ ಒಂದು ಮತವೂ ತಿರಸ್ಕೃತವಾಗಬಾರದು ಎಂದು ತರಬೇತಿ ನೀಡಲಾಗಿತ್ತು.‌ ಇದಕ್ಕೆ ಸಹಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ. ಇದಕ್ಕೆ ದುಡಿದಂತಹ ಪಕ್ಷದ ಎಲ್ಲಾ ಶಾಸಕರು, ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹಾಗೂ ಇತರೇ ಕಾರ್ಯದರ್ಶಿಗಳನ್ನು ನಾನು ಅಭಿನಂದಿಸುತ್ತೇನೆ ಎಂದರು.

ನಮ್ಮ‌ ಪಕ್ಷದಿಂದ ಐದು ಅಭ್ಯರ್ಥಿಗಳು ನಿಂತಿದ್ದರು. ನಮ್ಮ ಶಾಸಕರ ಸಂಖ್ಯಾಬಲ ಎಷ್ಟಿತ್ತು ಎಂಬುದು ಮಾಧ್ಯಮಗಳಿಗೆ ತಿಳಿದಿತ್ತು. ಐದು ಜನ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿತ್ತು ಅವರು ಗೆದ್ದಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ್ ಕಾರ್ತಿಕ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಜನಸೇವೆ ನಿರಂತರವಾಗಿರಲಿ, ನಾಡಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅಪಾರವಾಗಿರಲಿ ಎಂದು ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular