HomeLatest Newsಹೃದಯಾಘಾತಕ್ಕೆ ಮತ್ತೊಂದು ಬಲಿ: ತೀವ್ರ ಎದೆ ನೋವಿನಿಂದ ASI ಸಾವು

ಹೃದಯಾಘಾತಕ್ಕೆ ಮತ್ತೊಂದು ಬಲಿ: ತೀವ್ರ ಎದೆ ನೋವಿನಿಂದ ASI ಸಾವು

ತುಮಕೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಎದೆ ನೋವಿನಿಂದಾಗಿ ಎ ಎಸ್ ಐ ಓರ್ವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.

54 ವರ್ಷದ ಎನ್.ಜಿ.ಪವಾರ್ ಮೃತ ಎ ಎಸ್ ಐ. ಕೆ.ಎಸ್.ಆರ್.ಪಿ ಬೆಟಾಲಿಯನ್ ಸಿಬ್ಬಂದಿ ಬ್ಯಾರಕ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದರು. ತಕ್ಷಣ ಸಿಬ್ಬಂದಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್.ಜಿ.ಪವಾರ್ ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದವರು. ಅವರ ಪತ್ನಿ ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ತೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular