HomeEntertainmentBREAKING NEWS: ನಟಿ ರುಕ್ಮಿಣಿ ವಸಂತ್ ಡೀಪ್ ಫೇಕ್ ಫೋಟೋ ವೈರಲ್ ಕೇಸ್: ಮೂವರು ಅರೆಸ್ಟ್

BREAKING NEWS: ನಟಿ ರುಕ್ಮಿಣಿ ವಸಂತ್ ಡೀಪ್ ಫೇಕ್ ಫೋಟೋ ವೈರಲ್ ಕೇಸ್: ಮೂವರು ಅರೆಸ್ಟ್

ಬೆಂಗಳೂರು: ನಟಿ ರುಕ್ಮಿಣಿ ವಸಂತ್ ಡೀಪ್ ಫೇಕ್ ಫೋಟೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ನಿವಾಸಿಗಳಾದ ಚಂದ್ರಕಾಂತ್(33), ರಂಜಿತ್(25) ಮತ್ತು ಬಾಗಲಕೋಟೆ ಮೂಲದ ರವಿಕುಮಾರ್(24) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳಿಂದ ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಎಐ ತಂತ್ರಜ್ಞಾನ ಬಳಸಿ ರುಕ್ಮಿಣಿ ವಸಂತ್ ಅವರ ಬಿಕಿನಿ ಧರಿಸಿದ ರೀತಿಯ ವಿಡಿಯೋ ಫೋಟೋ ರಚಿಸಿ ವೈರಲ್ ಮಾಡಿದ್ದರು. ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವರ

ಕನ್ನಡ ಚಿತ್ರರಂಗದ ಖ್ಯಾತ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸೃಷ್ಟಿಸಲಾಗಿದ್ದ ನಕಲಿ (Deepfake) ಬಿಕಿನಿ ವೀಡಿಯೊ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಈ ಕುರಿತು ನಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೊಗಳು ಮತ್ತು ಫೋಟೋಗಳು ಸಂಪೂರ್ಣವಾಗಿ ನಕಲಿ ಹಾಗೂ ಎಐ ತಂತ್ರಜ್ಞಾನದಿಂದ ಸೃಷ್ಟಿಸಲಾದವು (Fabricated) ಎಂದು ರುಕ್ಮಿಣಿ ವಸಂತ್ ಸ್ಪಷ್ಟಪಡಿಸಿದ್ದರು. ಯಾರೋ ಒಬ್ಬರ ದೇಹಕ್ಕೆ ತಮ್ಮ ಮುಖವನ್ನು ಡಿಜಿಟಲ್ ಆಗಿ ಜೋಡಿಸಿ ತೇಜೋವಧೆ ಮಾಡಲು ಈ ರೀತಿ ಮಾಡಲಾಗಿದೆ ಎಂದು ಅವರು ಹೇಳಿದ್ದರು.

“ಇದು ವೈಯಕ್ತಿಕ ಗೌಪ್ಯತೆಯ ಗಂಭೀರ ಉಲ್ಲಂಘನೆ. ಕೇವಲ ನಟಿಯರಷ್ಟೇ ಅಲ್ಲ, ಸಾಮಾನ್ಯ ಹುಡುಗಿಯರಿಗೂ ಇಂತಹ ಪರಿಸ್ಥಿತಿ ಎದುರಾಗುತ್ತಿದೆ. ತಂತ್ರಜ್ಞಾನವನ್ನು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ” ಎಂದು ಅವರು ಆತಂಕ ಹೊರಹಾಕಿದ್ದಾರೆ.

ಈ ನಕಲಿ ವೀಡಿಯೊ ಹಾಗೂ ಫೋಟೋಗಳನ್ನು ಹರಿಬಿಟ್ಟ ಮತ್ತು ಹಂಚಿಕೊಂಡ 29 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ರುಕ್ಮಿಣಿ ವಸಂತ್ ಅಧಿಕೃತವಾಗಿ ದೂರು ನೀಡಿದ್ದಾರೆ.

ದೂರಿನ ಅನ್ವಯ 9 ಇನ್‌ಸ್ಟಾಗ್ರಾಮ್ ಖಾತೆಗಳು, 14 ಎಕ್ಸ್(ಟ್ವಿಟರ್) ಖಾತೆಗಳು ಹಾಗೂ 6 ಫೇಸ್‌ಬುಕ್ ಪೇಜ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ (IT Act) ಸೆಕ್ಷನ್ 66C, 66D ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಚುರುಕುಗೊಳಿಸಿದ ಪೊಲೀಸರು  ನಕಲಿ ವೀಡಿಯೊಗಳ ಮೂಲವನ್ನು ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular