HomeKarnatakaಪ್ರಚೋದನಾಕಾರಿ ಭಾಷಣ ಆರೋಪ: ಅನಂತಕುಮಾರ್ ಹೆಗಡೆ ವಿರುದ್ಧದ ಕೇಸ್ ಗೆ ತಡೆ

ಪ್ರಚೋದನಾಕಾರಿ ಭಾಷಣ ಆರೋಪ: ಅನಂತಕುಮಾರ್ ಹೆಗಡೆ ವಿರುದ್ಧದ ಕೇಸ್ ಗೆ ತಡೆ

ಬೆಂಗಳೂರು: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮದ್ದೂರಿನಲ್ಲಿ 2026ರ ಮಾರ್ಚ್ 23ರಂದು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರು ಮತ್ತು ಅದರ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯ ಪೀಠ ಶುಕ್ರವಾರ ವಿಚಾರಣೆ ನಡೆದೆ.

ಕೆಲಕಾಲ ಅರ್ಜಿ ಆಲಿಸಿದ ನ್ಯಾಯ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಅರ್ಜಿ ಸಂಬಂಧ ಮದ್ದೂರು ಠಾಣೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 10ಕ್ಕೆ ಮಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೂ ಪರ ಸಂಘಟನೆಗಳ ಒಕ್ಕೂಟ ಸ್ವಾತಂತ್ರ್ಯ ಸೇನಾನಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ಬಲಿದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮದ್ದೂರು ಪೊಲೀಸರು ಅನಂತಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ತಮ್ಮ ವಿರುದ್ಧದ ಪ್ರಕರಣ ಮತ್ತು ವಿಚಾರಣಾ ಪ್ರಕ್ರಿಯೆಗೆ ಕೋರಿ ಅನಂತ್ ಕುಮಾರ್ ಹೆಗಡೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ನಡೆದಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular