HomeKarnatakaನಾಳೆ NEET ಮರು ಪರೀಕ್ಷೆ ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ...

ನಾಳೆ NEET ಮರು ಪರೀಕ್ಷೆ ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ ಘೋಷಣೆ

ಬಳ್ಳಾರಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು ಜೂ.21 ರಂದು ಮಧ್ಯಾಹ್ನ 02 ರಿಂದ ಸಂಜೆ 05.30 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ಬಳ್ಳಾರಿ ನಗರದ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳು ಜಮಾಯಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಇಂಟರ್ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಕಟ್ಟುನಿಟ್ಟಿನ ಪ್ರತಿಬಂಧಕ ಆದೇಶ ಜಾರಿಗೊಳಿಸಲಾಗಿದೆ. ಈ ಕಟ್ಟುನಿಟ್ಟಿನ ನಿಯಮಗಳು ಪರೀಕ್ಷೆಯ ಮೇಲ್ವಿಚಾರಣೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಜಿಟಿಟಿಸಿ ಕೇಂದ್ರದಲ್ಲಿ ವಿವಿಧ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಇಲ್ಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಬಹುಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಪೂರ್ಣಾವಧಿ ಅತಿಥಿ ಬೋಧಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

*ಬೋಧಕ ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ:*

ಎಲೆಕ್ಟಿçಕಲ್: ಹುದ್ದೆ ಸಂಖ್ಯೆ 02, 3 ರಿಂದ 5 ವರ್ಷಗಳ ಅನುಭವ, ವಿದ್ಯಾರ್ಹತೆ ಡಿಪ್ಲೋಮಾ/ಇಇಇ ಇನ್ ಬಿಇ.

ಎಲೆಕ್ಟಾçನಿಕ್ಸ್: 01 ಹುದ್ದೆ, 3 ರಿಂದ 5 ವರ್ಷಗಳ ಅನುಭವ, ವಿದ್ಯಾರ್ಹತೆ ಬಿಇ/ಎಂ.ಟೆಕ್ ಇನ್ ಇ&ಸಿ.

ಮೆಕಾನಿಕಲ್: ಹುದ್ದೆ 01, 2 ರಿಂದ 5 ವರ್ಷಗಳ ಅನುಭವ, ವಿದ್ಯಾರ್ಹತೆ ಡಿಪ್ಲೋಮಾ/ಬಿಇ/ಎಂ.ಟೆಕ್/ಡಿಟಿಡಿಎ/ಮೆಕಾನಿಕಲ್.

ಕಂಪ್ಯೂಟರ್ ಸೈನ್ಸ್: ಹುದ್ದೆ 01, 2 ರಿಂದ 5 ವರ್ಷಗಳ ಅನುಭವ, ಬಿಇ/ಎಂ.ಟೆಕ್ ಇನ್ ಸಿಎಸ್.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ವಿಳಾಸ: ಜಿ.ಟಿ.ಟಿ.ಸಿ., ಐಶ್ವರ್ಯ ಕಾಲೋನಿ (ಐ.ಟಿ.ಐ. ಕ್ಯಾಂಪಸ್), ಕಂಟೋನ್‌ಮೆAಟ್, ಬಳ್ಳಾರಿ – 583104 ಅಥವಾ ಮೊ.9620057086, ದೂ.08392-200087 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಟಿಟಿಸಿ ಸಂಸ್ಥೆಯ ಪ್ರಾಂಶುಪಾಲ ಮುತ್ತಣ್ಣ ದರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular