HomeKarnatakaBIG NEWS: ಇದೇ ಮೊದಲ ಬಾರಿಗೆ ಅಧಿಕಾರ ಹಂಚಿಕೆ ಗುಟ್ಟು ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್

BIG NEWS: ಇದೇ ಮೊದಲ ಬಾರಿಗೆ ಅಧಿಕಾರ ಹಂಚಿಕೆ ಗುಟ್ಟು ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಲೀಂ ಮಹಮ್ಮದ್ ಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ದರ್ಗಾಗಳ ಧರ್ಮ ಗುರುಗಳ ನಿಯೋಗ ಮನವಿ ಮಾಡಿದೆ. ಈ ವೇಳೆ ಅಧಿಕಾರ ಹಂಚಿಕೆಯ ಗುಟ್ಟನ್ನು ಡಿ.ಕೆ. ಶಿವಕುಮಾರ್ ಬಿಚ್ಚಿಟ್ಟಿದ್ದಾರೆ.

ಇದೇ ಮೊದಲ ಬಾರಿಗೆ ಅಧಿಕಾರ ಹಂಚಿಕೆಯ ಗುಟ್ಟು ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಮಾಡುತ್ತಾರೆ ಎಂದುಕೊಂಡಿದ್ದೆ. ವರಿಷ್ಠರು ನನ್ನನ್ನೇ ಸಿಎಂ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಸಿದ್ದರಾಮಯ್ಯನವರಿಗೂ ಅವಕಾಶ ಕೊಡೋಣ ಎಂದು ಹೇಳಿದರು. ಅಂದು ಇಬ್ಬರು ಶೇರ್ ಮಾಡಿಕೊಳ್ಳಿ ಎಂದು ಪಕ್ಷ ಹೇಳಿತ್ತು ಎಂದು ತಿಳಿಸಿದ್ದಾರೆ.

ಅಂದು ಈ ಗುಟ್ಟು ಆಗಿತ್ತು. ಆದರೆ ಅದನ್ನು ಎಲ್ಲೂ ಹೇಳಲಿಲ್ಲ. ಅಧಿಕಾರ ಹಂಚಿಕೆ ವಿಚಾರ 3-4 ಜನರಿಗಷ್ಟೇ ಗೊತ್ತಿತ್ತು. ಆದರೆ ಪಕ್ಷ ನನಗೂ ಈಗ ಅವಕಾಶ ಮಾಡಿಕೊಟ್ಟಿದೆ ಎಂದು ಧರ್ಮ ಗುರುಗಳ ನಿಯೋಗದ ಮುಂದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಅಧಿಕಾರ ಹಂಚಿಕೆಯ ಗುಟ್ಟು ಬಿಚ್ಚಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅಧಿಕಾರ ಹಂಚಿಕೆ ನಿರ್ಧಾರವಾಗಿತ್ತು. ಈ ಬಗ್ಗೆ ಎಲ್ಲಿಯೂ ಹೇಳಿರಲಿಲ್ಲ. ಅಧಿಕಾರ ಹಂಚಿಕೆ ವಿಚಾರ ಮೂರರಿಂದ ನಾಲ್ಕು ಜನರಿಗಷ್ಟೇ ಗೊತ್ತಿತ್ತು. ಆದರೆ ಈಗ ಪಕ್ಷ ನನಗೂ ಅವಕಾಶ ಮಾಡಿಕೊಟ್ಟಿದೆ. ಎಲ್ಲ ಜಾತಿ ಧರ್ಮದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ನಾನು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ತಿಳಿಸಿದ್ದಾರೆ.

ನಿಮ್ಮ ಮನವಿಯನ್ನು ವರಿಷ್ಠರ ಗಮನಕ್ಕೆ ತರುತ್ತೇನೆ. ಅವರನ್ನು ಸಚಿವರನ್ನಾಗಿ ಮಾಡಿ, ಇವರನ್ನು ಮಾಡಿ ಎಂದು ಶ್ರೀಗಳು ಹೇಳುತ್ತಾರೆ. ನನಗೂ ತೀರ್ಮಾನ ಮಾಡೋಕೆ ಸಮಸ್ಯೆ ಆಗುತ್ತದೆ. ಅಲ್ಪಸಂಖ್ಯಾತರ ನಾಯಕರು ಎಲ್ಲರೂ ಶ್ರಮಪಟ್ಟಿದ್ದಾರೆ. ಆದರೆ ಈಗ ನಿಮ್ಮ ಭಾವನೆಗಳನ್ನು ವರಿಷ್ಠರಿಗೆ ತಿಳಿಸುತ್ತೇವೆ. ನಿಮಗೂ ಅವರಿಗೂ ಗೌರವ ನೀಡಬೇಕು. ವೈಷಮ್ಯ ಆಗುವುದು ಬೇಡ, ನಿಮ್ಮ ಭಾವನೆಯನ್ನು ತಿಳಿಸುತ್ತೇನೆ. ಹೊಸಬರಿಗೆ ಅವಕಾಶ ಸಿಗಬೇಕು ಎಂದು ಹೇಳುತ್ತೇನೆ. ದೆಹಲಿಯವರು ಚರ್ಚೆ ಮಾಡುತ್ತಿದ್ದಾರೆ ನೋಡೋಣ. ಲಕ್ಷ್ಮಣ ಸವದಿಗೂ ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಜಿ.ಎಸ್. ಪಾಟೀಲ್ ಅವರು ಸಚಿವ ಸ್ಥಾನ ಕೇಳುತ್ತಿದ್ದಾರೆ. ಹೆಚ್.ಕೆ. ಪಾಟೀಲ್ ಬದಲು ನಮಗೆ ಕೊಡಿ ಎನ್ನುತ್ತಿದ್ದಾರೆ. ಇಂತಹ ಸಮಸ್ಯೆ ನಮಗೆ ಇದೆ. ಆದರೆ ಹೇಳೋಕೆ ಆಗುವುದಿಲ್ಲ. ಕೆಲ ಸಮಯದಲ್ಲಿ ತ್ಯಾಗ ಮಾಡಬೇಕಾಗುತ್ತದೆ ಎಂದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular